ಅರ್ನಬ್ ಗೋಸ್ವಾಮಿಗೆ ಜಾಮೀನು..!
ಪತ್ರಕರ್ತ ಅರ್ನಬ್ ಗೋಸ್ವಾಮಿ ಬಂಧನ ವಿಚಾರವಾಗಿ ಮಹಾರಾಷ್ಟ್ರ ಸರ್ಕಾರದ ನಡೆಗೆ ಸುಪ್ರೀಂ ಕೋರ್ಟ್ ಆಕ್ಷೇಪಿಸಿದ್ದು, ಜಾಮೀನು ಕೂಡ ಮಂಜೂರಾಗಿದೆ.
ರಾಷ್ಟ್ರೀಯವಾದಿ ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತ್ರ ಜಾಮೀನು ಮಂಜೂರು ಮಾಡಿದೆ.
೨೦೧೮ರಲ್ಲಿ ಇಂಟರಿಯರ್ ಡಿಸೈನರ್ ಒಬ್ಬರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿಂತೆ ಪ್ರಕರಣ ಮುಗಿದು ಹೋಗಿದ್ದರೂ ಮಹಾರಾಷ್ಟ್ರ ಸರ್ಕಾರ ರಿ ಓಪನ್ ಮಾಡಿ ಬಂಧಿಸಿತ್ತು.
ಇಂದು ಸುಪ್ರೀಂ ಕೋರ್ಟ್ ನಲ್ಲಿ ಈ ವಿಚಾರವಾಗಿ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ ಅವರು ಅಸಮಾಧಾನ ಹೊರಹಾಕಿದ್ದು, ಸೈದ್ಧಾಂತಿಕ ಭಿನ್ನಾಭಿಪ್ರಾಯ ಇಟ್ಟುಕೊಂಡು ಸರ್ಕಾರಗಳು ಇಂಥ ಕ್ರಮಕ್ಕೆ ಮುಂದಾದರೆ ನ್ಯಾಯಾಂಗ ವ್ಯವಸ್ಥೆ ಇರೋದಾದರು ಏಕೆಂದು ಪ್ರಶ್ನಿಸಿದ್ದರು.
ಇದೀಗ ಅವರಿಗೆ ಸುಪ್ರೀಂ ಕೋರ್ಟ್ ನಲ್ಲಿ ಜಾಮೀನು ಮಂಜೂರಾಗಿದೆ ಎಂದು ಮೂಲಗಳು ತಿಳಿಸಿವೆ.