ಲಿಂಗಾಯತ ಸಿಎಂ ಕೂಗು: ಅನುಷ್ಠಾನಕ್ಕೆ ಬಂದರೆ ಖುಷಿ: ಬಸವಜಯ ಮೃತ್ಯುಂಜಯ ಸ್ವಾಮೀಜಿ

ಲಿಂಗಾಯತ ಸಿಎಂ ಕೂಗು: ಅನುಷ್ಠಾನಕ್ಕೆ ಬಂದರೆ ಖುಷಿ: ಬಸವಜಯ ಮೃತ್ಯುಂಜಯ ಸ್ವಾಮೀಜಿ

ಬಾಗಲಕೋಟೆ:
ಲಿಂಗಾಯತ ಸಿಎಂ ವಿಚಾರ ಒಳ್ಳೆಯದು ಆದರೆ ಅದು ಬರೀ ಮಾತಾಗದೆ ಅನುಷ್ಠಾನಕ್ಕೆ ಬರಬೇಕೆಂದು ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಗುರುಪೀಠದ ಶ್ರೀಬಸವಜಯ ಮೃತ್ಯುಂಜಯ ಸ್ವಾಮೀಜಿ‌ ಹೇಳಿದ್ದಾರೆ.

ಬಸವ ಜಯಂತಿ ಪ್ರಯುಕ್ತ ಐಕ್ಯ ಮಂಟಪದ ದರ್ಶನ ಪಡೆದ ಅವರು ತಮ್ಮನ್ನು ಭೇಟಿಯ ಮಾಧ್ಯಮದವರೊಂದಿಗೆ ಮಾತನಾಡಿದರು.

ಲಿಂಗಾಯತರ ಬಗ್ಗೆ ವಿಪಕ್ಷ ನಾಯಕ‌ ಸಿದ್ದರಾಮಯ್ಯ ಹೇಳಿಕೆ ಕುರಿತಾದ ಪ್ರಶ್ನೆಗೆ ಉತ್ತರಿಸಿದ ಶ್ರೀಗಳು, ಈ ಬಗ್ಗೆ ಈಗಾಗಲೇ ಸಿದ್ದರಾಮಯ್ಯ ಅವರೇ ಸ್ಪಷ್ಟೀಕರಣ ಕೊಟ್ಟಿದ್ದಾರೆ ಹೀಗಾಗಿ ಆ ಬಗ್ಗೆ ಹೆಚ್ಚಿಗೆ ಮಾತನಾಡಲಾರೆ ಎಂದರು.

ರಾಜಕಾರಣದಲ್ಲಿ ಟೀಕೆ-ಟಿಪ್ಪಣಿ ಸಹಜ ಅದು ಕೇವಲ ಒಬ್ಬರನ್ನು ಉದ್ದೇಶಿಸಿ ಮಾತನಾಡಿರುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಚುನಾವಣೆಯಲ್ಲಿ ಬಸವಣ್ಣ, ಅಂಬೇಡ್ಕರ್ ಸೇರಿ ದಾರ್ಶನಿಕರ ಹೆಸರು ಬಳಸೋದು ಸಹಜ ಎಂದರು. 

ಕೂಡಲಸಂಗಮದಲ್ಲಿ ನಡೆಯಲಿರುವ ರಾಹುಲ್ ಗಾಂಧಿ ಕಾರ್ಯಕ್ರಮಕ್ಕೆ  ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಆಹ್ವಾನಿಸಿದ್ದಾರೆ ಆದರೆ ಆ ಬಗ್ಗೆ ಯೋಚಿಸಿ ತೀರ್ಮಾನಿಸಲಾಗುವುದು ಎಂದರು.