ಜಿಲ್ಲಾಡಳಿತದಿಂದ ಗಾಂಧಿ ಹಾಗೂ ಶಾಸ್ತ್ರೀ ಜಯಂತಿ ಆಚರಣೆ

Bagalkot-Bagalkote-Govt-programme

ಜಿಲ್ಲಾಡಳಿತದಿಂದ ಗಾಂಧಿ ಹಾಗೂ ಶಾಸ್ತ್ರೀ ಜಯಂತಿ ಆಚರಣೆ

*ಜಿಲ್ಲಾಡಳಿತದಿಂದ ಗಾಂಧಿ ಹಾಗೂ ಶಾಸ್ತ್ರೀ ಜಯಂತಿ ಆಚರಣೆ*

ಬಾಗಲಕೋಟೆ: ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ಆಶ್ರಯದಲ್ಲಿ ಗಾಂಧಿ ಜಯಂತಿ ಹಾಗೂ ಲಾಲಬಹದ್ದೂರ ಶಾಸ್ತ್ರೀ ಅವರ ಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತದ ಮುಖ್ಯದ್ವಾರದಲ್ಲಿ ರವಿವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.


            ಶಾಸಕ ವೀರಣ್ಣ ಚರಂತಿಮಠ, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ, ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ, ಜಿಲ್ಲಾಧಿಕಾರಿ ಪಿ.ಸುನೀಲ್‍ಕುಮಾರ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಯಪ್ರಕಾಶ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಯುಕೆಪಿಯ ವಿಶೇಷ ಜಿಲ್ಲಾಧಿಕಾರಿ ಸೋಮಲಿಂಗ ಗೆನ್ನೂರ, ಮಹಾವ್ಯವಸ್ಥಾಪಕ ರಾಹುಲ್‍ರತ್ನಂ ಪಾಂಡೆ, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಗಾಂಧಿ ಹಾಗೂ ಶಾಸ್ತ್ರೀ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆಗೈದು ನಮನ ಸಲ್ಲಿಸಿದರು. 
              ವಿವಿಧ ಧರ್ಮದ ಗುರುಗಳಾದ ಸಂಸ್ಕೃತ ಪಂಡಿತ ಬಿಂಧುಮಾಧವಾಚಾರ್ಯ ನಾಗಸಂಪಗಿ ಭಗವದ್ಗೀತಾ, ಸೇಂಟ್ ಸನ್ಸ್ ಸಿಸ್ಟರ ಪಾಲ್ವಿತ್ ಡಿಸೋಜಾ ಬೈಬಲ್ ಹಾಗೂ ಆಸೀಪ್ ಎಲ್.ಮುದಗಲ್ಲ ಅವರು ಕುರಾನ್ ಕುರಿತು ಉಪದೇಶ ನೀಡಿದರು. ಬಸವೇಶ್ವರ ಕಲಾ ಮಹಾವಿದ್ಯಾಲಯದ ಡಾ.ಆರ್.ಎಂ.ಬೆಣ್ಣೂರ ಮತ್ತು ಸಂಗೀತ ವಿಭಾಗದ ವಿದ್ಯಾರ್ಥಿಗಳಿಂದ ಸರ್ವಧರ್ಮ ಪ್ರಾರ್ಥನೆ ಮತ್ತು ವೈಷ್ಣವ ಜನತೋತನೆ, ರಘುಪತಿ ರಾಘವ ರಾಜಾರಾಮ ಗೀತೆ ಹಾಡಿಲಾಯಿತು.
            ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್.ಬಿರಾದಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಯಶ್ರೀ ಎಮ್ಮಿ, ಜಿಲ್ಲಾ ಕೃಷಿ ಜಂಟಿ ನಿರ್ದೇಶಕಿ ಚೇತನಾ ಪಾಟೀಲ,  ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ನಂದಾ ಹನಮರಟ್ಟಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಮೇಶ ಚವ್ಹಾಣ, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಶಿವಾನಂದ ಪಟ್ಟಣಶೆಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕಿ ಅಕ್ಕಮಹಾದೇವಿ ಕೆ.ಎಚ್, ತಹಶೀಲ್ದಾರ ವಿನಯಕುಮಾರ ಪಾಟೀಲ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಸಂಗಮೇಶ ಸಣ್ಣತಂಗಿ ಕಾರ್ಯಕ್ರಮ ನಿರೂಪಿಸಿದರು.


           ಗಾಂಧೀ ಹಾಗೂ ಶಾಸ್ತ್ರೀ ಜಯಂತಿ ಅಂಗವಾಗಿ ಜಿಲ್ಲಾಡಳಿತ ಮುಖ್ಯ ಆವರಣದಲ್ಲಿ ಖಾದಿ ಬಟ್ಟೆಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆ ಹಾಕಲಾಗಿದ್ದು, ಶಾಸಕ ವೀರಣ್ಣ ಚರಂತಿಮಠ ಭೇಟಿ ನೀಡಿ ವೀಕ್ಷಿಸಿದರು. ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ವಿವಿಧ ಬಗೆಯ ಖಾದಿ ಬಟ್ಟೆಗಳನ್ನು ಖರೀದಿಸಿದರು. ಪ್ರದರ್ಶನ ಹಾಗೂ ಮಾರಾಟ ಎರಡು ದಿನಗಳ ವರೆಗೆ ನಡೆಯಲಿದೆ.