AAPನತ್ತ ಜಿಲ್ಲೆಯಇಬ್ಬರು ಸಾಮಾಜಿಕ ಹೋರಾಟಗಾರರು..!

ಬಾಗಲಕೋಟೆಯ ಕರವೇ ಅಧ್ಯಕ್ಷ ರಮೇಶ ಬದ್ನೂರ ಹಾಗೂ ಇಳಕಲ್ಲಿನ ಹೋರಾಟಗಾರ ನಾಗರಾಜ ಹೊಂಗಲ್ ಅವರು ಆಮ್ ಆದ್ಮಿ ಪಕ್ಷ ಸೇರ್ಪಡೆಗೆ ಮುಂದಾಗಿದ್ದಾರೆ. ಸೋಮವಾರ ದೆಹಲಿಯಲ್ಲಿ ಅವರು ಪಕ್ಷ ಸೇರ್ಪಡೆ ಆಗಲಿದ್ದಾರೆ.

AAPನತ್ತ ಜಿಲ್ಲೆಯಇಬ್ಬರು ಸಾಮಾಜಿಕ ಹೋರಾಟಗಾರರು..!

ನಾಡನುಡಿ ನ್ಯೂಸ್

ಬಾಗಲಕೋಟೆ
ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ರಮೇಶ ಬದ್ನೂರ, ಇಳಕಲ್ಲಿನ ಹೋರಾಟಗಾರ ನಾಗರಾಜ ಹೊಂಗಲ್ ಸೋಮವಾರ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗಲಿದ್ದಾರೆ.

 ಕೆಲ ಮುಖಂಡರೊಂದಿಗೆ ಇಬ್ಬರೂ ರವಿವಾರ ದೆಹಲಿಗೆ ತೆರಳಿದ್ದು, ಸ್ವಯಂ ನಿವೃತ್ತಿ ಪಡೆದಿರುವ  ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರರಾವ್ ನೇತೃತ್ವದಲ್ಲಿ ಆಪ್ ಸೇರ್ಪಡೆ ಆಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆಪ್ ಸೇರಲಿರುವ ರಮೇಶ ಬದ್ನೂರ ಬಾಗಲಕೋಟೆ ವಿದಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಯಿದ್ದು, ಹುನಗುಂದ ವಿಧಾನಸಭಾ ಕ್ಷೇತ್ರದಿಂದ ನಾಗರಾಜ್ ಹೊಂಗಲ್ ಸ್ಪರ್ಧಿಸುವ ಸಾಧ್ಯತೆಯಿದೆ.

ಪಂಜಾಬ್ ನಲ್ಲಿ ಆಪ್ ಅಧಿಕಾರ ಹಿಡಿಯುತ್ತಿದ್ದಂತೆ ಸಾಮಾಜಿಕ ಹೋರಾಟಗಾರರು ಚುನಾವಣೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದು, ಬಾಗಲಕೋಟೆ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ವೇದಿಕೆ ಸಿಕ್ಕಂತಾಗಲಿದೆ.