ಆಲಮಟ್ಟಿ ಹಿನ್ನೀರಿನಲ್ಲಿ ಪಕ್ಷಿಧಾಮ ಸ್ಥಾಪನೆಗೆ ವನ್ಯಜೀವಿ ಮಂಡಳಿ ಒಪ್ಪಿಗೆ..!

ಆಲಮಟ್ಟಿ ಹಿನ್ನೀರಿನಲ್ಲಿ ಪಕ್ಷಿಧಾಮ ಸ್ಥಾಪನೆಗೆ ವನ್ಯಜೀವಿ ಮಂಡಳಿ ಒಪ್ಪಿಗೆ..!

ಬಾಗಲಕೋಟೆ:
ಆಲಮಟ್ಟಿ ಹಿನ್ನೀರಿನಲ್ಲಿ ಪಕ್ಷಿಧಾಮ ಸ್ಥಾಪನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕರ್ನಾಟಕ ವನ್ಯಜೀವಿ ಮಂಡಳಿ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

ಆಲಮಟ್ಟಿ ಹಿನ್ನೀರಿನ ಹಲವು ಪ್ರದೇಶಗಳಿಗೆ ಆಸ್ಟ್ರೇಲಿಯಾ, ಬಾಂಗ್ಲಾದೇಶ, ಗುಜರಾತ್ ಸೇರಿ ಹಲವೆಡೆಯಿಂದ ಭಾರೀ ಸಂಖ್ಯೆಯಲ್ಲಿ ಪಕ್ಷಿಗಳು ವಲಸೆ ಬರುತ್ತವೆ. ನಡುಗಡ್ಡೆ ಪ್ರದೇಶಗಳಲ್ಲಿ ಅವುಗಳು ಬೀಡು ಬಿಟ್ಟಿರುತ್ತವೆ.‌ಇದನ್ನು ಬಳಸಿಕೊಂಡು ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಲು ಸರ್ಕಾರ ಚಿಂತನೆ ನಡೆಸಿತ್ತು.‌ಈಗ ಅದಕ್ಕೊಂದು ನಿರ್ಣಾಯಕ ತೀರ್ಮಾನ ಪ್ರಕಟವಾಗಿದೆ.

ವಲಸೆ ಬರುವ ಪಕ್ಷಗಳ ವಿಹಾರಕ್ಕೆ ಯಾವುದೇ ರೀತಿಯಲ್ಲೂ ಅಡ್ಡಿಯಾಗದಂತೆ ಯೋಜನೆ ರೂಪಿಸಲಾಗಿದ್ದು, ಅದಕ್ಕೊಂದು ಸುಂದರ ರೂಪ ದೊರೆಯುವ ನಿರೀಕ್ಷೆಯಿದೆ.