ಕೋವಿಡ್ ಹಿನ್ನೆಲೆ ಬಾದಾಮಿ ಬನಶಂಕರಿ ದೇವಿ ಜಾತ್ರೆ ರದ್ದು

ಬಾದಾಮಿ ಬನಶಂಕರಿದೇವಿ ಜಾತ್ರೆಯನ್ನು ರದ್ದುಪಡಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಜನವರಿ ತಿಂಗಳಲ್ಲಿ ಪ್ರತಿ ವರ್ಷ ಜಾತ್ರೆ ನಡೆಯುತಿತ್ತು.

ಕೋವಿಡ್ ಹಿನ್ನೆಲೆ  ಬಾದಾಮಿ ಬನಶಂಕರಿ ದೇವಿ ಜಾತ್ರೆ ರದ್ದು

ನಾಡನುಡಿ ನ್ಯೂಸ್
ಬಾಗಲಕೋಟೆ:
ಉತ್ತರ ಕರ್ನಾಟಕದ ಆರಾಧ್ಯ ದೇವತೆ ಬನಶಂಕರಿದೇವಿ ಜಾತ್ರಾ ಮಹೋತ್ಸವವನ್ನು ಕೋವಿಡ್ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ರದ್ದುಗೊಳಿಸಿದೆ.

ಬನದ ಹುಣ್ಣಿಮೆಯಿಂದ ಆರಂಭಗೊಂಡು ಒಂದು ತಿಂಗಳ ಕಾಲ ನಡೆಯುತ್ತಿದ್ದ ಜಾತ್ರಾ ಮಹೋತ್ಸವದಲ್ಲಿ ಪ್ರತಿ ವರ್ಷ ಲಕ್ಷಾಂತರ ಜನ ಭಾಗವಹಿಸುತ್ತಿದ್ದರು. ಜಾತ್ರಾ ಸಂದರ್ಭದಲ್ಲಿ ಬರುತ್ತಿದ್ದ ನಾಟಕಗಳು ಉತ್ತರ ಕರ್ನಾಟಕದಲ್ಲಿ ಜನ ಮನಸೆಳೆಯುತ್ತಿದ್ದವು ಆದರೆ ಆ ಎಲ್ಲ ಸಂಭ್ರಮವನ್ನು ಈ ಬಾರಿ ಕೊರೊನಾ ನುಂಗಿ ಹಾಕಿದೆ.

ಜಾತ್ರೆಯನ್ನು ರದ್ದುಗೊಳಿಸಿರುವ ಕುರಿತಂತೆ ಬಾದಾಮಿ ತಾಲೂಕಾಡಳಿತ ಭವನದಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದ ಡಿಎಸ್ಪಿ ಚಂದ್ರಕಾಂತ ನಂದರೆಡ್ಡಿ, ಕೋವಿಡ್‌‌ ಹಿನ್ನೆಲೆಯಲ್ಲಿ ಜಾತ್ರೆಯನ್ನು ರದ್ದುಪಡಿಸಿರುವುದಾಗಿ ತಿಳಿಸಿದರು.

ಬನಶಂಕರಿ ಟ್ರಸ್ಟ ಕಮೀಟಿಯವರಿಗೆ ತಮ್ಮ ಪರಿವಾರದವರೊಂದಿಗೆ ಕೇವಲ ಬನಶಂಕರಿ ದೇವಿ ಪೂಜೆ ಮಾಡಲು ಸೂಚಿಸಿ ಯಾವುದೇ ರೀತಿಯ ಜನಸಂದಣೆಗೆ ಅವಕಾಶ ನೀಡದಂತೆ ಎಚ್ಚರಹಿಸಬೇಕು, ಗ್ರಾಮ ಪಂಚಾಯತಿಯ ಅಧಿಕಾರಿ ಗಳು ಈ ವರ್ಷ ಬನಶಂಕರಿ ಜಾತ್ರಾ ಮಹೋತ್ಸವವನ್ನು ರದ್ದು ಪಡಿಸಲಾಗಿದ್ದು ಮಾಧ್ಯಮದ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು, ತಾಲೂಕಾಡಳಿತ ತಮ್ಮ ಇಲಾಖೆಯ ಸಿಬ್ಬಂದಿ ಹಾಗೂ ತಾಲೂಕಿನ ಎಲ್ಲ ಇಲಾಖೆಯವರು ಜನಸಾಮಾನ್ಯರಿಗೆ ಬನಶಂಕರಿ ಜಾತ್ರೆ ರದ್ದಾದ ಬಗ್ಗೆ ಮಾಹಿತಿ ನೀಡಬೇಕು ಎಂದರು.

ಈ ಸಂದರ್ಭದಲ್ಲಿ ತಹಶಿಲ್ದಾರ ಸುಹಾಸ ಇಂಗಳೆ, ಪಿ.ಎಸ್.ಐ ಪ್ರಕಾಶ ಬಣಕಾರ, ಇಒ ಪುನಿತ, ತಾಲೂಕ ವೈದ್ಯಾಧಿಕಾರಿ ಮಲ್ಲಿಕಾರ್ಜುನ ಪಾಟೀಲ,  ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಮೇಶ ಅಥಣಿ, ಮಬ್ರೂಂಕರ, ಆಸಂಗಿ, ಸದಾಶಿವ ಮರಡಿ, ಚೊಳಚಗುಡ್ಡ ಪಿ.ಡಿ.ಒ ಸೇರಿದಂತೆ ತಾಲೂಕ ಮಟ್ಟದ ಅಧಿಕಾರಿಗಳು ಹಾಜರಿದ್ದರು.