ಗೋಹತ್ಯೆ ನಿಷೇಧ ಮಾಡಿಯೇ ಸಿದ್ಧ: ಸಚಿವ ಪ್ರಭು ಚವಾಣ್
ಗೋಹತ್ಯೆ ನಿಷೇಧ ಶೀಘ್ರದಲ್ಲಿ ಮಾಡುವುದಾಗಿ ಸಚಿವ ಪ್ರಭು ಚವಾಣ್ ಘೋಷಿಸಿದ್ದಾರೆ.
ನಾಡನುಡಿ ನ್ಯೂಸ್
ಬಾಗಲಕೋಟೆ:
ಗೋಹತ್ಯೆ ನಿಷೇಧ ಮಾಡುವುದಾಗಿ ಪಕ್ಷದ ಪ್ರಣಾಳಿಕೆಯಲ್ಲಿ ಘೋಷಿಸಲಾಗಿದ್ದು, ಶೀಘ್ರದಲ್ಲಿ ಕಾನೂನು ಜಾರಿಗೆ ತರಲಾಗುವುದು ಎಂದು ಪಶುಸಂಗೋಪನಾ ಸಚಿವ ಪ್ರಭು ಚವಾಣ್ ಘೋಷಿಸಿದ್ದಾರೆ.
ಬಾಗಲಕೋಟೆ ಜಿಲ್ಲಾಡಳಿತ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ೨೦೧೦-೧೧ ರಲ್ಲೇ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗಿತ್ತು ಅಂದು ಕೇಂದ್ರದಲ್ಲಿ ನಮ್ಮ ಸರ್ಕಾರ ಇರಲಿಲ್ಲ ಹೀಗಾಗಿ ಕಾಯ್ದೆ ಜಾರಿಗೆ ಬಂದಿರಲಿಲ್ಲ.
ಗೋಮಾತೆಯನ್ನು ರಕ್ಷಿಸುವ ಕಾರ್ಯವನ್ನು ಈಗ ಮಾಡೇ ತೀರುವುದಾಗಿ ಪ್ರಕಟಿಸಿದರು.
ಸಚಿವ ಸಂಪುಟ ಪುನಾರಚನೆ ಸಂಬಂಧ ಉತ್ತರಿಸಿದ ಅವರು ನಾನು ಸಾಮಾನ್ಯ ಕಾರ್ಯಕರ್ತನಾಗಿ ಮೂರು ದಶಕಗಳಿಂದ ಕಾರ್ಯನಿರ್ವಹಸಿದ್ದೇನೆ. ಹೈಕಮಾಂಡ್ ತೀರ್ಮಾನ ಅಂತಿಮ. ಸಿಎಂ ಹಾಗೂ ವರಿಷ್ಠರು ಈ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.