ಕಾಲೇಜುಗಳ ಆರಂಭ: ವಿದ್ಯಾರ್ಥಿಗಳಿಂದ ನೀರಸ ಪ್ರತಿಕ್ರಿಯೆ

ಜಿಲ್ಲೆಯಾದ್ಯಂತ ಕಾಲೇಜುಗಳು ಆರಂಭಗೊಂಡಿದ್ದು, ಈ‌ ಕುರಿತಾದ ವರದಿ ಇಲ್ಲಿದೆ.

ಕಾಲೇಜುಗಳ ಆರಂಭ: ವಿದ್ಯಾರ್ಥಿಗಳಿಂದ ನೀರಸ ಪ್ರತಿಕ್ರಿಯೆ


ನಾಡನುಡಿ ನ್ಯೂಸ್ 
ಬಾಗಲಕೋಟೆ:

ಜಿಲ್ಲೆಯಾದ್ಯಂತ ಮಂಗಳವಾರದಿಂದ ಕಾಲೇಜುಗಳು ಆರಂಭಗೊಂಡಿದ್ದು  ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಿರುವ ಹಿನ್ನಲೆಯಲ್ಲಿ ವಿದ್ಯಾರ್ಥಿಗಳಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಆರೇಳು ತಿಂಗಳ ನಂತರ ಕಾಲೇಜುಗಳು ಆರಂಭಗೊಳ್ಳುತ್ತಿರುವುದರಿಂದ ವಿದ್ಯಾರ್ಥಿ ಸಮೂಹದ ಪ್ರತಿಕ್ರಿಯೆ ಹೇಗಿರುತ್ತೆ ಎಂಬ ಕುತೂಹಲ ಮೂಡಿತ್ತು.

ಆದರೆ ಮೊದಲ ದಿನವೇ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇನ್ನೂ ಹಾಸ್ಟೇಲ್ ಗಳು ಆರಂಭಗೊಂಡಿದ್ದು ಅಲ್ಲಿಗೂ ವಿದ್ಯಾರ್ಥಿಗಳು ಆಗಮನ ನಿರೀಕ್ಷಿತ ಪ್ರಮಾಣದಲ್ಲಿ ಆಗಿಲ್ಲ.

ಅಮೀನಗಡದ ಸಂಗಮೇಶ್ವರ ಪದವಿ ಕಾಲೇಜು ಸೇರಿ ಹಲವೆಡೆ ವಿದ್ಯಾರ್ಥಿಗಳ ಕೋವಿಡ್ ಟೆಸ್ಟ್ ಗೆ ಕಾಲೇಜು ಆವರಣದಲ್ಲೇ ವ್ಯವಸ್ಥೆ ಕಲ್ಪಿಸಲಾಗಿತ್ತು.