ಶಾಸಕ ಸವದಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕಾಂಗ್ರೆಸ್ ಪ್ರತಿಭಟನೆ

ಮಹಾಲಿಂಗಪುರ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಸಂದರ್ಭದಲ್ಲಿ ಮಹಿಳಾ ಸದಸ್ಯರನ್ನು ಎಳೆದಾಡಿರುವ ಶಾಸಕ ಸಿದ್ದು ಸವದಿ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ಒತ್ತಾಯಿಸಿದೆ.

ಶಾಸಕ ಸವದಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕಾಂಗ್ರೆಸ್ ಪ್ರತಿಭಟನೆ

ನಾಡನುಡಿ ನ್ಯೂಸ್
ಬಾಗಲಕೋಟೆ
ಮಹಾಲಿಂಗಪುರ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ವೇಳೆ ಮಹಿಳಾ ಸದಸ್ಯೆಯರೊಂದಿಗೆ ಅನುಚಿತವಾಗಿ ವರ್ತಿಸಿರುವ ಶಾಸಕ ಸಿದ್ದು ಸವದಿ ಹಾಗೂ ಅವರ ಬೆಂಬಲಿಗರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಸಂವಿಧಾನ ಬದ್ಧವಾಗಿ ನಡೆಯುತ್ತಿದ್ದ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಮೂವರು ಮಹಿಳಾ ಸದಸ್ಯರನ್ನು ಶಾಸಕರು ತಡೆದಿದ್ದಾರೆ ಅವರ ವಿರುದ್ಧ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.

ಈ ಪೈಕಿ ಒಬ್ಬರನ್ನು ಅಪಹರಿಸಲಾಯಿತು, ಇನ್ನಿಬ್ಬರು ಸದಸ್ಯೆಯರಾದ ಸವಿತಾ ಹುರಕಡ್ಲಿ, ಚಾಂದನಿ ನಾಯಕ ಅವರನ್ನು ಎಳೆದಾಡಲಾಯಿತು.‌ಮಹಿಳೆಯರು ಎಂಬುದನ್ನು ನೋಡದೆ ಅನುಚಿತವಾಗಿ ವರ್ತಿಸಲಾಯಿತು, ಶಾಸಕ ಸಿದ್ದು ಸವದಿ ಇದರಲ್ಲಿ ನೇರವಾಗಿ ಶಾಮೀಲಾಗಿದ್ದಾರೆ. ಅವರ ವಿರುದ್ಧ ಕಠಿಣ ಕ್ರಮ‌ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರಕ್ಷಿತಾ ಈಟಿ, ರೇಣುಕಾ‌ ನ್ಯಾಮಗೌಡ, ರೇಣುಕಾ ನಾರಾಯಣಕರ, ಜಯಶ್ರೀ ಗುಳಬಾಳ, ಪಕ್ಷದ ಜಿಲ್ಲಾ ವಕ್ತಾರ ನಾಗರಾಜ‌ ಹದ್ಲಿ, ಎಸ್ ಸಿ ಘಟಕದ ಜಿಲ್ಲಾಧ್ಯಕ್ಷ ರಾಜು‌ ಮನ್ನಿಕೇರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಜಿಸಾಬ ದಂಡಿನ‌ ಮತ್ತಿತರರು ನೇತೃತ್ವ ವಹಿಸಿದ್ದರು.