ಭಾರತ ಜೋಡೋ ಯಾತ್ರೆ: ನಾಳೆ ಕಾಂಗ್ರೆಸ್ ಪೂರ್ವಭಾವಿ ಸಭೆ

ಭಾರತ ಜೋಡೋ ಯಾತ್ರೆ: ನಾಳೆ ಕಾಂಗ್ರೆಸ್ ಪೂರ್ವಭಾವಿ ಸಭೆ

ಬಾಗಲಕೋಟೆ:
ರಾಹುಲ್ ಗಾಂಧಿ ನೇತೃತ್ಚದ ಭಾರತ ಜೋಡೊ ಯಾತ್ರೆ ಅ.೧೫ರಂದು ಬಳ್ಳಾರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಶನಿವಾರ ಅ.೮ರಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಭೆ ಕರೆಯಲಾಗಿದೆ.

ಐಕ್ಯತಾ ಯಾತ್ರೆಯಲ್ಲಿ ಜಿಲ್ಲೆಯ ಕಾರ್ಯಕರ್ತರು, ಮುಖಂಡರು ಹೆಚ್ವಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ದೃಷ್ಠಿಯಿಂದ ಪೂರ್ವಭಾವಿ ಸಭೆ ನಡೆಸಲಾಗುತ್ತಿದೆ, ಮಾಜಿ ಸಚಿವ  ಮಲ್ಲಿಕಾರ್ಜುನ ನಾಗಪ್ಪ, ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠ, ಜಿಲ್ಲೆಯ ಶಾಸಕರು, ಮಾಜಿ ಶಾಸಕರು ಭಾಗಿಯಾಗಲಿದ್ದಾರೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜ ಹದ್ಲಿ ತಿಳಿಸಿದ್ದಾರೆ.