ಜಿಲ್ಲಾ ಕಾಂಗ್ರೆಸ್ ಕಚೇರಿಯ ಮುಂಭಾಗವೂ ಮೂರ್ತಿ ಪ್ರತಿಷ್ಠಾಪನೆ

ಜಿಲ್ಲಾ ಕಾಂಗ್ರೆಸ್ ಕಚೇರಿಯ ಮುಂಭಾಗವೂ ಮೂರ್ತಿ ಪ್ರತಿಷ್ಠಾಪನೆ

ಬಾಗಲಕೋಟೆ:ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗ ಜ.೨೬ರ ಮಧ್ಯಾಹ್ನ ೩.೩೦ಕ್ಕೆ ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ ಹಾಗೂ ರಾಜೀವ ಗಾಂಧಿ ಅವರ ಪ್ರತಿಮೆಗಳನ್ನು ಅನಾವರಣ ಮಾಡಲಾಗುತ್ತಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷ, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರು ಪ್ರತಿಮೆಗಳನ್ನು ಅನಾವರಗೊಳಿಸುವರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಜಿ.ನಂಜಯ್ಯನಮಠ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಜಿಲ್ಲೆಯ ಕಾಂಗ್ರೆಸ್ ಶಾಸಕರು, ಮಾಜಿ ಶಾಸಕರು, ಮುಂಚೂಣಿ ಘಟಕದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ‌ಸಮಿತಿ ಅಧ್ಯಕ್ಷ ನಾಗರಾಜ‌‌ ಹದ್ಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.