ಡಿಸಿಎಂ ಗೋವಿಂದ ಕಾರಜೋಳಗೆ ಮತ್ತೆ ಕೋವಿಡ್ ದೃಢ..!
ನಾಡನುಡಿ ನ್ಯೂಸ್
ಬಾಗಲಕೋಟೆ
ನಿರಂತರ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಮತ್ತೊಮ್ಮೆ ಕೋವಿಡ್ ದೃಢಪಟ್ಟಿದೆ.
ರಾಜ್ಯದ ಉಪಚುನಾವಣೆಗಳಲ್ಲಿ ಗೋವಿಂದ ಕಾರಜೋಳ ಅವರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಶುಕ್ರವಾರ ಕೋವಿಡ್ ದೃಢಪಟ್ಟ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.
ಕಳೆದ ವರ್ಷ ಕೋವಿಡ್ ಮೊದಲ ಬಾರಿ ಕಾಣಿಸಿಕೊಂಡಾಗಲೂ ಅವರಿಗೆ ಸೋಂಕು ದೃಢಪಟ್ಟಿತ್ತು. ಇದೀಗ ಅವರು ಮತ್ತೊಮ್ಮೆ ಚಿಕಿತ್ಸೆಗೆ ದಾಖಲಾಗಿದ್ದಾರೆ. ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಆಸ್ಪತ್ರೆಯಿಂದಲೇ ಮನವಿ ಮಾಡಿದ್ದಾರೆ.