ವಿದ್ಯಾಗಿರಿಯ ಶಾಲೆಯಲ್ಲಿ ಕೋವಿಡ್ ಸ್ಫೋಟ:12ಮಕ್ಕಳಲ್ಲಿ ಸೋಂಕು ದೃಢ
ಜಿಲ್ಲೆಯ ಶಾಲೆಯೊಂದರಲ್ಲಿ ೧೨ಕ್ಕೂ ಹೆಚ್ಚು ಮಕ್ಕಳಲ್ಲಿ ಸೋಂಕು ದೃಢಪಟ್ಟಿದೆ. ಶುಕ್ರವಾರ ಜಿಲ್ಲೆಯಲ್ಲಿ ಕೋವಿಡ್ ಸ್ಫೋಟಗೊಳ್ಳಲಿದೆ ಎಂದು ಹೇಳಲಾಗಿದೆ.
ನಾಡನುಡಿ ನ್ಯೂಸ್
ಬಾಗಲಕೋಟೆ:
ಜಿಲ್ಲೆಯಲ್ಲಿ ಮೂರನೇ ಅಲೆ ಆತಂಕ ತಲೆದೂರಿದ್ದು,
ವಿದ್ಯಾಗಿರಿಯ ಸಮೃದ್ಧಿ ಗುರುಕುಲ ಶಾಲೆಯ ೧೨ ಮಕ್ಕಳಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಮುಂದಿನ ಆದೇಶದವರೆಗೆ ಶಾಲೆಗೆ ರಜೆ ಘೋಷಿಸಲಾಗಿದೆ ಎಂದು ಪಾಲಕರಿಗೆ ಆಡಳಿತ ಮಂಡಳಿ ತಿಳಿಸಿದೆ.
ಶಾಲೆಯ ಮಕ್ಕಳಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿರುವುದು ಗುರುವಾರ ದೃಢಪಡುತ್ತಿದ್ದಂತೆ ಶಾಲೆಯ ಎಲ್ಲ ೮೦೦ ಮಕ್ಕಳ ತಪಾಸಣೆಗೆ ಜಿಲ್ಲಾಡಳಿತ ಮುಂದಾಗಿದೆ.
ಶಾಲೆಯ ಬೋಧಕ,ಬೋಧಕೇತರ ಸಿಬ್ಬಂದಿ ಹಾಗೂ ಮಕ್ಕಳ ತಪಾಸಣೆಗೆ ಆರೋಗ್ಯ ಇಲಾಖೆ ಮುಂದಾಗಿದ್ದು, ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡರೂ ಸೋಂಕಿನ ಯಾವುದೇ ಲಕ್ಷಣ ಕಂಡು ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶಾಲೆಯಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡ ಬಗ್ಗೆ ನಾಡನುಡಿಗೆ ಪ್ರತಿಕ್ರಿಯಿಸಿದ ಡಿಎಚ್ಒ ಡಾ.ಅನಂತ ದೇಸಾಯಿ ಅವರು ಶಾಲೆಯ ಮಕ್ಕಳಲ್ಲಿ ಸೋಂಕು ದೃಢಪಟ್ಟಿರುವುದು ನಿಜ. ಶಾಲೆಯ ಎಲ್ಲ ಮಕ್ಕಳ ಸ್ವ್ಯಾಬ್ ಪಡೆಯಲಾಗುತ್ತಿದೆ ಎಂದು ಮಾಹಿತಿ ನೀಡಿದರು.