ಡಿಸಿಸಿ ಬ್ಯಾಂಕ್ ಗದ್ದುಗೆ: ಕಾಂಗ್ರೆಸ್ ಗೆ ಬಿಸಿ ತುಪ್ಪ. ರೆಬೆಲ್ ಆದ ಕಾಶಪ್ಪನವರ
ಬಿಡಿಸಿಸಿ ಬ್ಯಾಂಕ್ ಗೆ ಕಾಂಗ್ರೆಸ್ ಗುಂಪಿನಿಂದ ಸರನಾಯಕ, ಮುರುಗೇಶ ಕಡ್ಲಿಮಟ್ಟಯಿಂದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ. ಈ ನಡುವೆ ಅಧ್ಯಕ್ಷ ಸ್ಥಾನಕ್ಕೆ ಕಾಶಪ್ಪನವರ ಕೂಡ ನಾಮಪತ್ರ ಸಲ್ಲಿಸಿರುವುದು ಕಾಂಗ್ರೆಸ್ ಗೆ ತಲೆನೋವಾಗಿದೆ.
ನಾಡನುಡಿ ನ್ಯೂಸ್
ಬಾಗಲಕೋಟೆ:
ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಆಯ್ಕೆ ವಿಚಾರ ಕಾಂಗ್ರೆಸ್ ಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ.
ಕಾಂಗ್ರೆಸ್ ಗುಂಪಿನಿಂದ ಅಧ್ಯಕ್ಷ ಸ್ಥಾನಕ್ಕೆ ಅಜಯಕುಮಾರ ಸರನಾಯಕ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಮುರುಗೇಶ ಕಡ್ಲಿಮಟ್ಟಿ ನಾಮಪತ್ರ ಸಲ್ಲಿಸಿದ್ದಾರೆ. ಈ ನಡುವೆ ವಿಜಯಾನಂದ ಕಾಶಪ್ಪನವರ ಬಂಡಾಯದ ಭಾವುಟ ಹಾರಿಸಿದ್ದಾರೆ. ಅವರೂ ಸಹ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ.
ನಂತರ ಮಾತನಾಡಿದ ಕಾಶಪ್ಪನವರ ಪಕ್ಷದ ಚಿಹ್ನೆಯಿಂದ ಗೆದ್ದಿಲ್ಲ, ಸಹಕಾರಿ ಕ್ಷೇತ್ರದ ಚುನಾವಣೆ ನನಗೆ ಟಿಕೆಟೂ, ವಿಪ್ಪೂ ಕೊಟ್ಟಿಲ್ಲ ಹೀಗಾಗಿ ಸ್ಪರ್ಧಿಸಿರುವುದಾಗಿ ತಿಳಿಸಿದ್ದಾರೆ.
ಈ ನಡುವೆ ಕಾಶಪ್ಪನವರ ಮನವೋಲಿಸುವ ಯತ್ನ ಕಾಂಗ್ರೆಸ್ ಮುಖಂಡರು ನಿಂದ ನಡೆಯುತ್ತಿದೆ ಎನ್ನಲಾಗಿದೆ. ಮಧ್ಯಾಹ ೩ ಗಂಟೆವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿರುವುದ್ದರಿಂದ ಏನೆಲ್ಲ ಬೆಳವಣಿಗೆಗಳು ನಡೆಯಲಿದೆ ಕಾದು ನೋಡಬೇಕಿದೆ.