ಡಿಸಿಸಿ ಬ್ಯಾಂಕ್ ಚುನಾವಣೆ :ಅಡ್ಡಮತದಾನ ಮಾಡಿದ ಇಬ್ಬರಿಗೆ ನೋಟಿಸ್ ಜಾರಿ ಮಾಡಿದ ಬಿಜೆಪಿ
ನಾಡನುಡಿ ನ್ಯೂಸ್
ಬಾಗಲಕೋಟೆ:
ಡಿಸಿಸಿ ಬ್ಯಾಂಕ್ ಅಧ್ಯಕ್ಷ,ಉಪಾಧ್ಯಕ್ಷ ಚುನಾವಣೆಗೆ ಸಂಬಂಧಿಸಿದಂತೆ ಇಬ್ಬರು ನಿರ್ದೇಶಕರಿಗೆ ನೋಟಿಸ್ ನೀಡಲಾಗಿದ್ದು, ಅದಕ್ಕೆ ಅವರು ಉತ್ತರವನ್ನೂ ನೀಡಿದ್ದಾರೆ ಅದನ್ನು ರಾಜ್ಯ ಘಟಕದ ಗಮನಕ್ಕೆ ತರಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ಟಿ.ಪಾಟೀಲ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ಅಡ್ಡ ಮತದಾನಕ್ಕೆ ಸಂಬಂಧಿಸಿದಂತೆ ಇಬ್ಬರಿವೆ ನೋಟಿಸ್ ಜಾರಿ ಮಾಡಲಾಗಿದೆ. ಅವರು ಉತ್ತರವನ್ನೂ ನೀಡಿದ್ದು, ತಮ್ಮ ನೋವುಗಳನ್ನೂ ಹೇಳಿಕೊಂಡಿದ್ದಾರೆ ಅದನ್ನು ವರಿಷ್ಠರ ಗಮನಕ್ಕೆ ತರಲಾಗುವುದು ಎಂದರು.
ಆದರೆ ಯಾರಿಗೆ ನೋಟೀಸ್ ಜಾರಿ ಮಾಡಿದ್ದೀರಿ ಎಂಬ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದರು.