ಹಿರಿಯ ಐಎಎಸ್ ಅಧಿಕಾರಿ ಕೆ.ಜಿ.ಶಾಂತಾರಾಮ ನಿಧನ

ಈ ಹಿಂದೆ ಬಾಗಲಕೋಟೆ ಜಿಲ್ಲಾಧಿಕಾರಿಯಾಗಿ ಪ್ರಸ್ತುತ ಬೆಂಗಳೂರಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಶಾಂತಾರಾಮ ಅವರು‌ ನಿಧನ ಹೊಂದಿದ್ದಾರೆ.

ಹಿರಿಯ ಐಎಎಸ್ ಅಧಿಕಾರಿ ಕೆ.ಜಿ.ಶಾಂತಾರಾಮ ನಿಧನ

ನಾಡನುಡಿ ನ್ಯೂಸ್
ಬಾಗಲಕೋಟೆ:
2017-18ರ ಅವಧಿಯಲ್ಲಿ ಬಾಗಲಕೋಟೆ ಜಿಲ್ಲಾಧಿಕಾರಿಯಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಕೆ.ಜಿ.ಶಾಂತಾರಾಮ ಅವರು ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದರು.

ಸಾಹಿತ್ಯದ ಬಗ್ಗೆಯೂ ಒಲವು ಹೊಂದಿದ್ದ ಅವರು ನಿಷ್ಠ, ಪ್ರಾಮಾಣಿಕ ಅಧಿಕಾರಿ ಎಂದು ಹೆಸರು ಮಾಡಿದ್ದರು.

ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದ ವೇಳೆ ಸುಸ್ತಿಬಡ್ಡಿ ಮನ್ನಾ ಮಾಡಿದ್ದರು, ಅದರ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಬಾಗಲಕೋಟೆಯಲ್ಲೇ ಚಾಲನೆ ನೀಡಿದ್ದರು.ಆಗ ಶಾಂತಾರಾಮ ಬಾಗಲಕೋಟೆ ‌ಜಿಲ್ಲಾಧಿಕಾರಿಯಾಗಿದ್ದರು. ಎಚ್ .ಡಿ.ಕುಮಾರಸ್ವಾಮಿ ಅವರೊಂದಿಗೆ ಉತ್ತಮ ಒಡನಾಟ ಹೊಂದಿದ್ದರು.