ಚುನಾವಣಾ ಕರ್ತವ್ಯ ಲೋಪ : ಅಧಿಕಾರಿ ಸಸ್ಪೆಂಡ್
ಬಾಗಲಕೋಟೆ: ತೇರದಾಳ ಪುನರ್ವಸತಿ ಮತ್ತು ಪುನರ್ ನಿರ್ಮಾಣ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ಸಿದ್ದಪ್ಪ ಚೌಡಾಪೂರ ಅವರನ್ನು ಚುನಾವಣಾ ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಅಮಾನತ್ತುಗೊಳಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ತೇರದಾಳ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ರಬಕವಿ-ಬನಹಟ್ಟಿ ಏರಿಯಾಗೆ ವಿಡಿಯೋ ಕಣ್ಗಾವಲು ತಂಡಕ್ಕೆ ಸದರಿಯವರನ್ನು ನಿಯೋಜಿಸಲಾಗಿತ್ತು. ಆದರೆ ಇದುವರೆಗೂ ಕರ್ತವ್ಯಕ್ಕೆ ಹಾಜರಾಗಿರುವದಿಲ್ಲ. ಸಾಕಷ್ಟು ಬಾರಿ ದೂರವಾಣಿ ಕರೆ ಮಾಡಿದರೂ ಕರೆಗಳನ್ನು ಸ್ವೀಕರಿಸದೇ ಬೇಜವಾಬ್ದಾರಿತ ವರ್ತಿಸಿದ್ದಾರೆ. ಚುನಾವಣೆ ಕಾರ್ಯವು ಅತೀ ಮಹತ್ವದ್ದಾಗಿದ್ದು, ಚುಣಾವಣಾಧಿಕಾರಿಗಳ ಆದೇಶವನ್ನು ಪಾಲನೆ ಮಾಡದೇ ಕರ್ತವ್ಯಕ್ಕೆ ಗೈರು ಹಾಜರಾಗಿರುವದರಿಂದ ಸದರಿಯವನ್ನು ಇಲಾಖಾ ವಿಚಾರಣೆ ಬಾಕಿ ಇರಿಸಿ ಸೇವೆಯಿಂದ ಅಮಾನತುಗೊಳಿಸಿರುವುದಾಗಿ ಆದೇಶದಲ್ಲಿ ತಿಳಿಸಿದ್ದಾರೆ.