ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ: ನ್ಯಾಯಾಲಯದ ಅಂಗಳದಲ್ಲಿ ಫಲಿತಾಂಶ
ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆಗೆ ಚುನಾವಣಾ ಪ್ರಕ್ರಿಯೆ ನಡೆದಿದೆ. ಆದರೆ ಫಲಿತಾಂಶ ನಾಳೆ ಪ್ರಕಟಗೊಳ್ಳಲಿದೆ.
ನಾಡನುಡಿ ನ್ಯೂಸ್
ಬಾಗಲಕೋಟೆ
ಬಾಗಲಕೋಟೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಮತದಾನ ಪ್ರಕ್ರಿಯೆ ನಡೆಸಿಲ್ಲ.
ಸರ್ಕಾರದ ಷೇರು ಇಲ್ಲದಿದ್ದರೂ ಸಿದ್ದನಗೌಡ ಪಾಟೀಲ ಅವರನ್ನು ಡಿಸಿಸಿ ಬ್ಯಾಂಕ್ ಗೆ ನಾಮನಿರ್ದೇಶನ ಮಾಡಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ನ್ಯಾಯಾಲಯದ ಮೊರೆ ಹೋಗಿತ್ತು.
ಈ ಹಿನ್ನೆಲೆಯಲ್ಲಿ ಮತ ಪರಿಗಣಿಸಬೇಕೋ, ಬೇಡವೋ ಎಂಬ ಕಾರಣಕ್ಕಾಗಿ ಚುನಾವಣೆ ನಡೆಸಿ ಫಲಿತಾಂಶ ಪ್ರಕಟಿಸದಂತೆ ನ್ಯಾಯಾಲಯ ಸೂಚಿಸಿದೆ. ಈ ಕುರಿತು ಬುಧವಾರ ವಿಚಾರಣೆ ನಡೆಯಲಿದ್ದು, ಅಲ್ಲಿನ ತೀರ್ಪಿನ ನಂತರವೇ ಫಲಿತಾಂಶ ಅಧಿಕೃತವಾಗಿ ದೊರೆಯಲಿದೆ.
ಮಧ್ಯಾಹ್ನ ಚುನಾವಣೆಗೆ ಬಿಜೆಪಿಯ ಸದಸ್ಯರು ಒಟ್ಟಾಗಿ ಆಗಮಿಸಿದರು. ಬಂಡಾಯದ ಭಾವುಟ ಹಾರಿಸಿದ್ದ ವಿಜಯಾನಂದ ಕಾಶಪ್ಪನವರ ಚುನಾವಣೆಯಿಂದ ದೂರ ಉಳಿದಿದ್ದಾರೆ ಎಂದು ತಿಳಿದು ಬಂದಿದೆ.