ಹಿಂಜಾವೇಯಿಂದ ಎಚ್ಚರಿಕೆಯ ರಣಕಹಳೆ: ನಾಳೆ ಬಾಗಲಕೋಟೆ ಅಘೋಷಿತ ಬಂದ್..?
ಕೆರೂರ ಪಟ್ಟಣದಲ್ಲಿ ನಡೆದ ಘಟನೆ ಖಂಡಿಸಿ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಸೋಮವಾರ ಬೃಹತ್ ಪ್ರತಿಭಟನೆಗೆ ಕರೆ ನೀಡಲಾಗಿದೆ.
ನಾಡನುಡಿ ನ್ಯೂಸ್
ಬಾಗಲಕೋಟೆ:
ಹಿಂದೂಪರ ಸಂಘಟನೆಗಳು ಸೋಮವಾರ ಎಚ್ಚರಿಕೆಯ ರಣಕಹಳೆ ಅಡಿ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಅಘೋಷಿತ ಬಂದ್ ವಾತಾವರಣ ಕಂಡು ಬರುವ ಸಾಧ್ಯತೆ ಇದೆ.
ಈಗಾಗಲೇ ಹೊಟೇಲ್ ಗಳು ಸೋಮವಾರ ಕಾರ್ಯನಿರ್ವಹಿಸದಿರಲು ತೀರ್ಮಾನಿಸಿದ್ದ, ವಿದ್ಯಾಗಿರಿಯಲ್ಲೂ ವ್ಯಾಪಾರಸ್ಥರು ಸಂಜೆವರೆಗೆ ವ್ಯಾಪಾರದಿಂದ ದೂರ ಉಳಿಯಲು ತೀರ್ಮಾನಿಸಿದ್ದಾರೆ.
ಬೇರೆ, ಬೇರೆ ವರ್ತಕ ಸಂಘಟನೆಗಳನ್ನು ಹಿಂದೂ ಸಂಘಟನೆಗಳ ಮುಖಂಡರು ಭೇಟಿ ಮಾಡಿ ಮನವಿ ಮಾಡಿದ್ದು, ಬಹುತೇಕರು ಸ್ವಯಂ ಪ್ರೇರಣೆಯಿಂದ ವ್ಯಾಪಾರದಿಂದ ದೂರ ಉಳಿದು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸುವುದಾಗಿ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಕೆರೂರ ಪಟ್ಟಣದಲ್ಲಿ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರ ಮೇಲೆ ನಡೆದಿರುವ ಹಲ್ಲೆಯನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಂಡಿದೆ.
ಕಿಲ್ಲೆಯಲ್ಲಿರುವ ಶ್ರೀ ಅಂಬಾಭವಾನಿ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ಹೊರಡಲಿದೆ.