ಕೆಲಸಕ್ಕೆ ಹಾಜರಾಗಲು ರನ್ನ ಸಕ್ಕರೆ ಕಾರ್ಖಾನೆ ಕಾರ್ಮಿಕರಿಗೆ ಡಿಸಿ ಮನವಿ

ಕೆಲಸಕ್ಕೆ ಹಾಜರಾಗಲು ರನ್ನ ಸಕ್ಕರೆ ಕಾರ್ಖಾನೆ ಕಾರ್ಮಿಕರಿಗೆ ಡಿಸಿ ಮನವಿ

ಬಾಗಲಕೋಟೆ: ಸಹಕಾರಿ ಸಕ್ಕರೆ ಕಾರ್ಖಾನೆಗೆ ಸಂಬಂಧಿಸಿದಂತೆ ಕಾರ್ಮಿಕರ ಹಿತ ಕಾಪಾಡುವ ದೃಷ್ಠಿಯಿಂದ ಕೆಲಸಕ್ಕೆ ಹಾಜರಾಗುವಂತೆ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಕಾರ್ಮಿಕರಲ್ಲಿ ಮನವಿ ಮಾಡಿಕೊಂಡರು.

          ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಹೂಡಿಕೆದಾರರು ಹಾಗೂ ರೈತರ ಸಮಸ್ಯೆಗಳನ್ನು ಆಲಿಸುವ ನಿಟ್ಟಿನಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಕಾರ್ಮಿಕರ ಸಮಸ್ಯೆಯ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲು ಅವಕಾಶ ಕಲ್ಪಸುವಂತೆ ಜಿಲ್ಲಾಡಳಿತಕ್ಕೆ ಕೋರಿದರು. ಈ ಹಿನ್ನಲೆಯಲ್ಲಿ ಅಗತ್ಯ ಕ್ರಮಕೈಗೊಳ್ಳುವುದಾಗಿ ಜಿಲ್ಲಾಡಳಿತದಿಂದ ಭರವಸೆ ನೀಡಲಾಯಿತು. 
          ಕಾರ್ಮಿಕರು ತಮ್ಮ ಉಳಿದ ಬಾಕಿ ಪಾವತಿ ಕುರಿತಂತೆ ಕ್ರಮಕೈಗೊಳ್ಳಲು ಕೋರಿದ ಹಿನ್ನಲೆಯಲ್ಲಿ ಅದಕ್ಕೆ ಸಂಬಂಧಿಸಿದಂತೆ ವ್ಯವಸ್ಥಾಪಕ ನಿರ್ದೇಶಕರು ರನ್ನ ಸಹಕಾರಿ ಸಕ್ಕರೆ ಕಾರ್ಖಾನೆಗೆ ಸೂಚಿಸಲಾಯಿತು. ಈ ಅವಧಿಯಲ್ಲಿ ಕಾರ್ಮಿಕರಿಗೆ ಕಾರ್ಮಿಕರ ಹಿತಾಸಕ್ತಿ ಕಾಪಾಡುವ ಉದ್ದೇಶದಿಂದ ಜಿಲ್ಲಾಡಳಿತವು ಈಗಾಗಲೇ ವಿವಿಧ ಕಾರ್ಖಾನೆಗಳಿಗೆ ತಾತ್ಕಾಲಿಕ ಪರಿಹಾರವಾಗಿ ಉದ್ಯೋಗ ನೀಡಲು ತಿಳಿಸಿದ್ದು, ಕಾರ್ಮಿಕರು ಕೆಲಸಕ್ಕೆ ಹಾಜರಾಗುವಂತೆ ಜಿಲ್ಲಾಡಳಿತದಿಂದ ಮತ್ತೊಮ್ಮೆ ಮನವಿ ಮಾಡಿಕೊಂಡಿರುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದರು.
         ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ ಸೇರಿದಂತೆ ರನ್ನ ಸಕ್ಕರೆ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ, ಕಾರ್ಮಿಕ ಮುಖಂಡರು, ರೈತ ಮುಖಂಡರಾದ ಬಸವಂತಪ್ಪ ಕಾಂಬಳೆ, ಮುತ್ತಪ್ಪ ಕೋಮಾರ, ಈರಪ್ಪ ಹಂಚಿನಾಳ, ವಿಠಲ, ಕಬ್ಬೂರ ಪಾಟೀಲ ಹಾಗೂ ಇತರರು ಉಪಸ್ಥಿತರಿದ್ದರು.