ಮಹಾಲಿಂಗಪುರ ಘಟನೆ: ಎಲ್ಲ ಆಯಾಮಗಳಲ್ಲಿಯೂ ತನಿಖೆ- ಎಸ್ಪಿ ಜಗಲಾಸರ್
ಮಹಾಲಿಂಗಪುರ ಘಟನೆಗೆ ಸಂಬಂಧಿಸಿದಂತೆ ಎಸ್ ಪಿ ಜಗಲಾಸರ್ ಅವರು ಪ್ರತಿಕ್ರಿಯೆ ನೀಡಿದ್ದು, ಅದರ ಮಾಹಿತಿ ಇಲ್ಲಿದೆ ನೋಡಿ.
ನಾಡನುಡಿ ನ್ಯೂಸ್
ಬಾಗಲಕೋಟೆ:
ಮಹಾಲಿಂಗಪುರ ಪುರಸಭೆ ಗಲಾಟೆ ಸಂಬಂಧ ಸುಮೋಟೊ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು ತನಿಖೆ ಮುಂದುವರಿದಿದೆ ಎಂದು ಎಸ್ ಪಿ ಲೋಕೇಶ ಜಗಲಾಸರ್ ತಿಳಿಸಿದ್ದಾರೆ.
ಗುರುವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಘಟನೆ ಸಂಬಂಧ ತನಿಖೆ ಮುಂದವರಿದಿದೆ ಎಂದರು.
ಚುನಾವಣೆ ಸಂದರ್ಭದಲ್ಲಿ ಭದ್ರತೆಗಾಗಿ ಸಕಲ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು, ಅಷ್ಟಾಗಿಯೂ ಘಟನೆ ನಡೆದಿದೆ. ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಲಾಗುವುದು ಎಂದಿದ್ದಾರೆ.