ಬಾಗಲಕೋಟೆಯಲ್ಲಿ ನೇಣು ಬಿಗಿದುಕೊಂಡು ವೈದ್ಯ ವಿದ್ಯಾರ್ಥಿನಿ‌ ಆತ್ಮಹತ್ಯೆ

ಬಾಗಲಕೋಟೆಯಲ್ಲಿ ನೇಣು ಬಿಗಿದುಕೊಂಡು ವೈದ್ಯ ವಿದ್ಯಾರ್ಥಿನಿ‌ ಆತ್ಮಹತ್ಯೆ

ನಾಡನುಡಿ ನ್ಯೂಸ್
ಬಾಗಲಕೋಟೆ

ನಗರದಲ್ಲಿ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ‌.

ಬಾಗಲಕೋಟೆ ಮೆಡಿಕಲ್ ಕಾಲೇಜಿನಲ್ಲಿ‌ ಅಂತಿಮ ವರ್ಷ ವ್ಯಾಸಂಗ ಮಾಡುತ್ತಿದ್ದ ಸಿಂಧೂರಿಕಾ(೨೪) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ.

ಬಾಗಲಕೋಟೆಯ ಮೆಡಿಕಲ್ ಕಾಲೇಜು ಬಳಿಯ ಕಾಲನಿಯಲ್ಲಿ ಬಾಡಿಗೆ ಮನೆಯಲ್ಲಿ ತಂದೆ-ತಾಯಿ ಜತೆಗೆ‌ ಸಿಂಧೂರಿಕಾ ವಾಸವಾಗಿದ್ದಳ್ಳು. ಇತರ ಇಬ್ಬರು ಮಕ್ಕಳು ಬೆಂಗಳೂರಿನಲ್ಲಿ ವಾಸವಾಗಿದ್ದರಿಂದ ಆಗಾಗ್ಗೆ ಬೆಂಗಳೂರಿಗೆ ಹೋಗಿ ಬರುತ್ತಿದ್ದರು. 

ಈಗಲೂ ಅವರು ಬೆಂಗಳೂರಿಗೆ ತೆರಳಿದ್ದರಿಂದ ಸಿಂಧೂರಿಕಾ ಮನೆಯಲ್ಲಿ ಒಬ್ಬಳ್ಳೆ ಇದ್ದಳು. ಶನಿವಾರ ಸಂಜೆ ೮.೩೦ರ ಹೊತ್ತಿಗೆ ಆಕೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ರವಿವಾರ ಆಕೆಯ ಪಾಲಕರು ಬಂದ ನಂತರವಷ್ಟೇ ಹೆಚ್ಚಿನ ಮಾಹಿತಿ ಲಭಿಸಲಿದೆ.