ವಿದ್ಯಾಗಿರಿಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ
ನಾಡನುಡಿ ನ್ಯೂಸ್
ಬಾಗಲಕೋಟೆ:
ವಿದ್ಯಾಗಿರಿ ಮುಖ್ಯರಸ್ತೆಯಲ್ಲಿ ಶುಕ್ರವಾರ ಬೆಳಗ್ಗೆ ವ್ಯಕ್ತಿಯೋರ್ವನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿಗೆ ಕಾರಣ ತಿಳಿದು ಬಂದಿಲ್ಲ.
ಕಲಾದಗಿ ರಸ್ತೆಯ ಅಯೋಧ್ಯೆ ಹೊಟೇಲ್ ವೃತ್ತದ ಬಳಿ ಸಣ್ಣಗಾತ್ರದ ಮರಕ್ಕೆ ವ್ಯಕ್ತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ನವನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.