ಪದವೀಧರ ಶಿಕ್ಷಕರ ಪ್ರವೇಶಾತಿ ಪರೀಕ್ಷೆ : ಜಿಲ್ಲಾಧಿಕಾರಿ ಭೇಟಿ ಪರಿಶೀಲನೆ
ಬಾಗಲಕೋಟೆ:ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಹಿನ್ನೆಲೆಯಲ್ಲಿ ಎರಡನೇ ದಿನವಾದ ರವಿವಾರದಂದು ವಿದ್ಯಾಗಿರಿಯ ಬಸವೇಶ್ವರ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪಿಯು ಕಾಲೇಜ ಮತ್ತು ನವನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜನ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ ಭೇಟಿ ನೀಡಿ ಪರಿಶೀಲಿಸಿದರು. ಪರೀಕ್ಷಾ ಕೇಂದ್ರಗಳಲ್ಲಿ ಭೇಟಿ ನೀಡಿದ ಸಂದರ್ಭದಲ್ಲಿ ಪರೀಕ್ಷೆಯ ಎಲ್ಲ ಸಿದ್ದತೆಗಳನ್ನು ಪರಿಶೀಲಿಸಿದ ಅವರು ಪರೀಕ್ಷೆ ಸುಸೂತ್ರವಾಗಿ ನಡೆಯುವಂತೆ ಹೆಚ್ಚಿನ ನಿಗಾವಹಿಸಲು ಪರೀಕ್ಷೆಗೆ ನಿಯೋಜನೆಗೊಂಡ ಅಧಿಕಾರಿಗಳಿಗೆ ಸೂಚಿಸಿದರು.
ಸಿಇಟಿ ಪರೀಕ್ಷೆ 1927 ಅಭ್ಯರ್ಥಿಗಳು ಗೈರು :
ನಗರದ 22 ಪರೀಕ್ಷೆ ಕೇಂದ್ರಗಳಲ್ಲಿ ನಡೆದ ಎರಡನೇ ದಿನದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಒಟ್ಟು 4721 ಅಭ್ಯರ್ಥಿಗಳು ನೋಂದಣಿ ಆಗಿದ್ದು, ಅದರಲ್ಲಿ 2794 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇನ್ನೂಳಿದ 1927 ಅಭ್ಯರ್ಥಿಗಳು ಪರೀಕ್ಷೆ ಗೈರು ಹಾಜರು ಆಗಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್.ಬಿರಾದಾರ ತಿಳಿಸಿದ್ದಾರೆ.