ಘಟಪ್ರಭಾ ನದಿಗೆ ಕೂಡಲೇ 2 ಟಿಎಂಸಿ ನೀರು ಬಿಡುಗಡೆಗೆ: ಡಿಸಿಎಂ ಕಾರಜೋಳ ಸೂಚನೆ
ಬೆಂಗಳೂರು: ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ 2ಟಿಎಂಸಿ ನೀರನ್ನು ಕೂಡಲೇ ಬಿಡುವಂತೆ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಿಗೆ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ಸೂಚಿಸಿದ್ದಾರೆ.
ಈಗಾಗಲೇ ಬಿಸಿಲಿನ ತಾಪ ಹೆಚ್ಚಾಗಿದ್ದು, ಘಟಪ್ರಭಾ ನದಿಯಲ್ಲಿ ನೀರು ಬತ್ತುತ್ತಿದೆ.ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ನೀರನ್ನು ಬಿಡುಗಡೆ ಮಾಡುವಂತೆ ಸೂಚಿಸಿದ ಡಿಸಿಎಂ, ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಸಾರ್ವಜನಿಕರು ನೀರನ್ನು ಮಿತವಾಗಿ ಉಪಯೋಗಿಸಬೇಕು ಎಂದು ಉಪಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.