ಜ.೧೭ರಂದು ಜಿಲ್ಲೆಗೆ ಅಮಿತ್ ಷಾ
ನಾಡನುಡಿ ನ್ಯೂಸ್
ಬಾಗಲಕೋಟೆ:
ಶಾಸಕ ಮುರುಗೇಶ ನಿರಾಣಿ ಸಮೂಹಗಳ ತೆಕ್ಕೆಗೆ ಸೇರಿರುವ ಬಾದಾಮಿ ತಾಲೂಕು ಕೇದಾರನಾಥ ಸಕ್ಕರೆ ಕಾರ್ಖಾನೆ ಉದ್ಘಾಟನೆಗೆ ಕೇಂದ್ರ ಗೃಹ ಸಚಿವ ಅಮಿತ ಷಾ ಆಗಮಿಸಲಿದ್ದಾರೆ.
ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಾಥ್ ನೀಡಲಿದ್ದು, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸೇರಿ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ತಿಳಿಸಿದರು.
ಅಂದು ಬೆಳಗ್ಗೆ ೧೦.೩೦ಕ್ಕೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಜಿಲ್ಲೆಯ ಜನ ಅಧಿಕ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ನಗರದಲ್ಲಿ ನಡೆದ ಬಿಜೆಪಿ ಜನಸೇಕ ಸಮಾವೇಶದಲ್ಲಿ ಅವರು ಕೋರಿದರು.