ಕಾಶಪ್ಪನವರ ಮನೆಗೆ ಮಾಜಿ ಸಚಿವ ವಿನಯ ಕುಲಕರ್ಣಿ ಭೇಟಿ

ಸಿಬಿಐ ಬಂಧನದ ನಂತರ ಜೈಲಿನಲ್ಲಿದ್ದ ಮಾಜಿ ಸಚಿವ ವಿನಯ ಕುಲಕರ್ಣಿ ಶನಿವಾರ ಹೊರ ಬಂದಿದ್ದು, ಲೋಕಾಪುರದ ಮಹಾಂತೇಶ ಉದುಪುಡಿ,‌ಇಳಕಲ್ಲಿನಲ್ಲಿರುವ ವಿಜಯಾನಂದ ಕಾಶಪ್ಪನವರ ಮನೆಗೆ ಭೇಟಿ‌ ನೀಡಿದ್ದಾರೆ

ಕಾಶಪ್ಪನವರ ಮನೆಗೆ ಮಾಜಿ ಸಚಿವ ವಿನಯ ಕುಲಕರ್ಣಿ ಭೇಟಿ

ನಾಡನುಡಿ ನ್ಯೂಸ್
ಬಾಗಲಕೋಟೆ:
ಯೋಗೀಶಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ‌ಮಾಜಿ ಸಚಿವ ವಿನಯ ಕುಲಕರ್ಣಿ ಜೈಲಿನಿಂದ ಹೊರಬರುತ್ತಿದ್ದಂತೆ ಜಿಲ್ಲೆ ಮೂಲಕ ಬೆಂಗಳೂರಿಗೆ ತೆರಳಿದ್ದಾರೆ. ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಮನೆಗೆ ಅವರು ಭೇಟಿ ನೀಡಿದ್ದಾರೆ.

ಶನಿವಾರ ಮಧ್ಯಾಹ್ನ ಬೆಳಗಾವಿಯ ಹಿಂಡಲಗಾ ಜೈಲಿನಿಂದ ಜಾಮೀನಿನ ಮೇಲೆ ಹೊರಬಂದಿರುವ ಅವರು ತಮ್ಮ ಸ್ನೇಹಿತ, ಜಿಪಂ ಮಾಜಿ ಸದಸ್ಯ ದಿವಂಗತ ಮಹಾಂತೇಶ ಉದುಪುಡಿ ಅವರ ಲೋಕಾಪುರದ ನಿವಾಸಕ್ಕೆ ಭೇಟಿ ನೀಡಿ ಸಾಂತ್ವಾನ ಹೇಳಿದ್ದಾರೆ.

ನಂತರ ಇಳಕಲ್ ನಗರದಲ್ಲಿರುವ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಮನೆಗೆ ಭೇಟಿ ನೀಡಿದ ಅವರು ಅಲ್ಪೋಪಹಾರ ಸವಿದಿದ್ದಾರೆ. ಅಲ್ಲಿಂದ ಅವರು ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ ಎಂದು ತಿಳಿದುಬಂದಿದೆ.