ಬಿಜೆಪಿ ಮುಖಂಡರಿಗೆ ಸಚಿವ ತಿಮ್ಮಾಪೂರ ತಾಕೀತು...!

ಬಿಜೆಪಿ ಮುಖಂಡರಿಗೆ ಸಚಿವ ತಿಮ್ಮಾಪೂರ ತಾಕೀತು...!
ಬಾಗಲಕೋಟೆ:ದೇಶಕ್ಕಾಗಿ ಕುಟುಂಬಸ್ಥರನ್ನು ಕಳೆದುಕೊಂಡಿರುವ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಬಿಜೆಪಿ ನಾಯಕರು ಹಗುರವಾಗಿ ಮಾತನಾಡುವುದನ್ನು ನಿಲ್ಲಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ತಾಕೀತು ಮಾಡಿದ್ದಾರೆ. 
ರಾಹುಲ್ ಗಾಂಧಿ ಅವರ ಬಗ್ಗೆ ಬಿಜಪಿ ನಾಯಕರು ಮಾಡುತ್ತಿರುವ ಆರೋಪ ಖಂಡಿಸಿ ನಗರದ ಬಸವೇಶ್ವರ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದಿಂದ ಮಂಗಳವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ದೇಶಕ್ಕಾಗಿ ರಾಹುಲ್ ಗಾಂಧಿ ಅವರ ಅಜ್ಜಿ ಇಂದಿರಾ ಗಾಂಧಿ ಹಾಗೂ ತಂದೆ ರಾಜೀವ್ ಗಾಂಧಿ ಅವರು ಜೀವವನ್ನೇ ತ್ಯಾಗ ಮಾಡಿದ್ದಾರೆ. ಅವರ ವಿಚಾರವಾಗಿ ಬಿಜೆಪಿ ನಾಯಕರು ಇಲ್ಲಸಲ್ಲ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕೆಂದು  ಹೇಳಿದರು. 
ಸ್ವಾತಂತ್ರಾö್ಯಪೂರ್ವ ಹಾಗೂ ಸ್ವಾತಂತ್ರö್ಯನAತರದಲ್ಲಿ ದೇಶಕ್ಕೆ ಕಾಂಗ್ರೆಸ್ ಸಾಕಷ್ಟು ಕೊಡುಗೆಗ ನೀಡಿದೆ. ಏನನ್ನೂ ಮಾಡದ ಬಿಜೆಪಿ ಅವರು ಕೇವಲ ಸುಳ್ಳು ಹೇಳುವುದರಲ್ಲೇ ಕಾಲಹರಣ ಮಾಡುತ್ತಿದ್ದಾರೆ ಎಂದು ದೂರಿದರು. ಸುಳ್ಳಿನ ಫ್ಯಾಕ್ಟರಿಯನ್ನೇ ಬಿಜೆಪಿ ನಾಯಕರು ತೆರೆದಿದ್ದಾರೆ ಎಂದು ಹೇಳಿದರು. ಬಿಜೆಪಿ ಅವರಿಗೆ ಸಂವಿಧಾನ, ಅಂಬೇಡ್ಕರ್ ಬಗ್ಗೆ ಗೌರವವಿಲ್ಲ. ಅದಕ್ಕಾಗಿಯೇ ಪದೇ, ಪದೆ ಸಂವಿಧಾನಕ್ಕೆ ಧಕ್ಕೆ ತರುವ ರೀತಿ ಮಾತುಗಳನ್ನಾಡುತ್ತಾರೆ. ಜನರೇ ಇವರಿಗೆ ತಕ್ಕಪಾಠ ಕಲಿಸಬೇಕೆಂದು ಹೇಳಿದರು. 
ಶಾಸರಾದ ಜೆ.ಟಿ.ಪಾಟೀಲ, ಎಚ್.ವೈ.ಮೇಟಿ ಅವರು ಮಾತನಾಡಿ, ಗಾಂಧಿ ಕುಟುಂಬ ತಮ್ಮ ಸರ್ವಸ್ವವನ್ನೂ ದೇಶಕ್ಕಾಗಿ ಮೀಸಲಿಟ್ಟಿದೆ. ರಾಹುಲ್ ಗಾಂಧಿ ಅವರು ದೇಶದ ಭರಸವೆಯ ನಾಯಕಾರಿ ಬೆಳೆಯುತ್ತಿದ್ದು, ಇದನ್ನು ಸಹಿಸದ ಬಿಜೆಪಿ ನಾಯಕರು ಸುಳ್ಳು ಸುದ್ದಿಯನ್ನು ಹರಡುತ್ತಿದ್ದಾರೆ. ಅವರಿಗೆ ಬೆದರಿಕೆ ಹಾಕುವ ರೀತಿಯ ಮಾತುಗಳನ್ನಾಡುತ್ತಿದ್ದಾರೆ ಎಂದು ದೂರಿದರು. 
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಜಿ.ನಂಜಯ್ಯನಮಠ ಅವರು ಮಾತನಾಡಿ, ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿAದಲೂ ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಬೆದರಿಸುವ ಕೆಲಸವನ್ನು ಮಾಡುತ್ತಿದೆ. ಇವರ ಬಣ್ಣ ಗೊತ್ತಾಗಿ ಜನ ಕಾಂಗ್ರೆಸ್ ಬೆಂಬಲಿಸುತ್ತಿದ್ದು, ಅದನ್ನು ಸಹಿಸದೆ ರಾಹುಲ್ ಗಾಂಧಿ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಕಾರ್ಯಕ್ಕೆ ಕೈ ಹಾಕಿದೆ ಇದು ಬಿಜೆಪಿಗೆ ತಿರುಗುಬಾಣವಾಗಲಿದೆ ಎಂದರು. 
ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ, ಕೆಪಿಸಿಸಿ ಉಪಾಧ್ಯಕ್ಷ ಎಂ.ಬಿ.ಸೌದಾಗರ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರಕ್ಷಿತಾ ಈಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಬಳ್ಳಾರಿ, ವಕ್ತಾರ ಚಂದ್ರಶೇಖರ ರಾಠೋಡ, ಎಸ್‌ಸಿ ಘಟಕದ ಅಧ್ಯಕ್ಷ ರಾಜು ಮನ್ನಿಕೇರಿ,  ಆನಂದ ಜಿಗಜಿನ್ನಿ, ರಮೇಶ ಬದ್ನೂರ, ಮುತ್ತು ಜೋಳದ, ಮಲ್ಲಿಕಾರ್ಜುನ ಮೇಟಿ, ಮಲ್ಲಿಕಾರ್ಜುನ ಶಿರೂರ ಇತರರು ನೇತೃತ್ವ ವಹಿಸಿದ್ದರು.