ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಬೆಡ್‌ಗಳ ಸಂಖ್ಯೆ ೧೫೫ಕ್ಕೆ ಹೆಚ್ಚಳ
ಬಾಗಲಕೋಟೆ ಆ.೧೨:
ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಕೋವಿಡ್ ಆಸ್ಪತ್ರೆ ಕೂಡ ಹಂತ, ಹಂತವಾಗಿ ತನ್ನ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ಮುಂದಾಗಿದೆ. ಉಸಿರಾಟದ ತೊಂದರೆಯಿAದ ಬಳಲುತ್ತಿದ್ದ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಲಭ್ಯವಾಗುತ್ತಿಲ್ಲ ಎಂಬ ಆರೋಪಕ್ಕೂ ಈ ಮುಕ್ತಿ ಸಿಗಲಿದ್ದು, ಜಿಲ್ಲಾಸ್ಪತ್ರೆಯಲ್ಲಿನ ಆಕ್ಸಿಜನ್ ಬೆಡ್‌ಗಳನ್ನು ೧೫೫ಕ್ಕೆ ಹೆಚ್ಚಿಸಲಾಗಿದೆ.
ಈ ಮೊದಲು ಜಿಲ್ಲಾಸ್ಪತ್ರೆಯಲ್ಲಿ ೪೪ ಆಕ್ಸಿಜನ್ ಬೆಡ್‌ಗಳು ಇದ್ದವು. ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ೩ ಸಾವಿರದ ಗಡಿ ದಾಟಿದ್ದು, ಹಲವು ಪ್ರಕರಣಗಳಲ್ಲಿ ತಡವಾಗಿ ಆಸ್ಪತ್ರೆಗೆ ಬರುತ್ತಿರುವುದರಿಂದ ಉಸಿರಾಟ ಸೇರಿ ಹಲವು ಗಂಭೀರ ಸಮಸ್ಯೆಗಳು ಕಂಡುಬರುತ್ತಿವೆ. ರೋಗಿಗಳ ಸಂಖ್ಯೆಯೂ ಹೆಚ್ಚಿರುವುದರಿಂದ ತೊಂದರೆ ಉಂಟಾಗದAತೆ ನಿರ್ವಹಿಸಲು ಆಕ್ಸಿಜನ್ ಹಾಸಿಗೆಗಳ ಸಂಖ್ಯೆಯನ್ನು ೧೫೫ಕ್ಕೆ ಹೆಚ್ಚಿಸಲಾಗಿದೆ.
ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಕಡಿಮೆ ಇದ್ದಾಗ ಅಲ್ಲಿನ ಸೌಲಭ್ಯ ಹಾಗೂ ಸಿಬ್ಬಂದಿ ಕಾರ್ಯನಿರ್ವಹಣೆ ಬಗ್ಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿತ್ತು. ಆದರೆ ರೋಗಿಗಳ ಸಂಖ್ಯೆ ಏರುತ್ತಲೇ ಆಸ್ಪತ್ರೆ ಬಗ್ಗೆ ದೂರುಗಳು ಸಹ ಹೆಚ್ಚಳಗೊಂಡಿದ್ದವು. ಕೋವಿಡ್ ಸಂಖ್ಯೆ ಹೆಚ್ಚಾಗುತ್ತಲೇ ಇರುವುದರಿಂದ ಹಂತ,ಹAತವಾಗಿ ಸೌಲಭ್ಯಗಳನ್ನು ಹೆಚ್ಚಿಸುವ ಕಾರ್ಯವನ್ನು ಜಿಲ್ಲಾಡಳಿತ ಮಾಡುತ್ತಿದೆ.
ಆಸ್ಪತ್ರೆ ಈಗ ಆಧುನಿಕ : ಜಿಲ್ಲಾ ಕೋವಿಡ್ ಆಸ್ಪತ್ರೆ ಹಂತ, ಹಂತವಾಗಿ ಅಭಿವೃದ್ಧಿ ಹೊಂದುತ್ತಿದೆ. ಪೂರ್ಣಪ್ರಮಾಣದಲ್ಲಿ ಪ್ರಯೋಗಾಲಯವನ್ನು ಆಸ್ಪತ್ರೆ ಹೊಂದಿದ್ದು, ಇದೀಗ ಆಕ್ಸಿಜನ್ ಬೆಡ್‌ಗಳ ಪ್ರಮಾಣವನ್ನೂ ಹೆಚ್ಚಿಸಿಕೊಂಡಿದೆ. ಕಳೆದೊಂದು ವಾರದಿಂದ ಪ್ರತಿದಿನ ೧೫೦ರವರೆಗೆ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಗಂಭೀರ ಸ್ವರೂಪದ ಪ್ರಕರಣಗಳು ಹೆಚ್ಚಳಗೊಂಡರೆ ಸಮಸ್ಯೆ ಉಲ್ಬಣಿಸದಿರಲಿ ಎಂಬ ಕಾರಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಜಿಲ್ಲಾಸ್ಪತ್ರೆಯು ೨೫೦ ಹಾಸಿಗೆ ಸಾಮರ್ಥ್ಯವನ್ನು ಹೊಂದಿದೆ. ಆದರೆ ರೋಗಿಗಳ ಸಂಖ್ಯೆ ಹೆಚ್ಚಳಗೊಂಡಿರುವುದರಿAದ ೩೧೦ಕ್ಕೆ ಏರಿಸಲಾಗಿದೆ. ಜಿಲ್ಲಾ ಸರ್ಜನ್ ಡಾ.ಪ್ರಕಾಶ ಬಿರಾದಾರ, ವೈದ್ಯಾಧಿಕಾರಿ ಡಾ.ಚಂದ್ರಕಾAತ ಜವಳಿ ನೇತೃತ್ವದಲ್ಲಿ ಚಿಕಿತ್ಸೆ ಒದಗಿಸುವ ಕಾರ್ಯನಡೆಯುತ್ತಿದೆ. ರೋಗಿಗಳ ಸಂಖ್ಯೆ ಹೆಚ್ಚಳಗೊಂಡಿರುವುದರಿAದ ಆರೋಪಗಳು ಆಗಾಗ ಕೇಳಿ ಬರುತ್ತಿದ್ದು, ಪ್ರತಿ ಬಾರಿ ಗಮನಸೆಳೆದಾಗಲೂ ಹಲವು ಬದಲಾವಣೆಗಳನ್ನು ರೂಢಿಸಿಕೊಳ್ಳಲಾಗುತ್ತಿದೆ. ಈ ಹಿಂದೆ ಪ್ರಯೋಗಾಲಯದ ವರದಿಯಲ್ಲಿ ವಿಳಂಬ ಉಂಟಾಗುತಿತ್ತು. ಇದೀಗ ಅದನ್ನು ತಪ್ಪಿಸಲಾಗಿದೆ. ಊಟೋಪಚಾರದ ಬಗ್ಗೆ ಆರೋಪಗಳು ಬಂದ ನಂತರ ಆಸ್ಪತ್ರೆ ಆವರಣದ ಅಡುಗೆ ಮನೆಯಲ್ಲೇ ಆಹಾರ ಸಿದ್ಧಪಡಿಸುವ ಕಾರ್ಯವನ್ನೂ ಆರಂಭಿಸಲಾಯಿತು. ಇದೀಗ ಹಾಸಿಗೆ ಸಾಮರ್ಥ್ಯವೂ ಹೆಚ್ಚಳಗೊಂಡಿರುವುದರಿAದ ಸೋಂಕಿತರಿಗೆ ಉತ್ತಮ ಚಿಕಿತ್ಸೆ ಲಭಿಸುವ ಭರವಸೆ ಮೂಡಿದೆ.
೨೧೨ ಜನ ಗುಣಮುಖ, ೧೭೦ ಹೊಸ ಪ್ರಕರಣಗಳು ದೃಢ :ಜಿಲ್ಲೆಯಲ್ಲಿ ೨೧೨ ಜನ ಕೋವಿಡ್‌ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಹೊಸದಾಗಿ ೧೭೦ ಕೊರೊನಾ ಪ್ರಕರಣಗಳು ಬುಧವಾರ ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು ೩೫೧೨ ಕೋವಿಡ್ ಪ್ರಕರಣಗಳು ದೃಡಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು ೨೩೪೫ ಜನ ಕೋವಿಡ್‌ನಿಂದ ಗುಣಮುಖರಾಗಿದ್ದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಜಿಲ್ಲೆಯಲ್ಲಿ ಕೋವಿಡ್‌ನಿಂದ ಶೇ.೬೬ ರಷ್ಟು ಗುಣಮುಖರಾಗಿದ್ದಾರೆ. ಹೊಸದಾಗಿ ದೃಡಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ ೨೩, ಬಾದಾಮಿ ೩೩, ಹುನಗುಂದ ೩೧, ಬೀಳಗಿ ೨೮, ಮುಧೋಳ ೯, ಜಮಖಂಡಿ ೪೩, ಬೇರೆಯ ಜಿಲ್ಲೆಯ ೩ ಜನ ಇದ್ದು, ಅವರನ್ನು ನಿಗದಿತ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲೆಯ ೧೧೭೯ ಸ್ಯಾಂಪಲ್‌ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದ್ದು, ಪ್ರತ್ಯೇಕವಾಗಿ ೬೩೬ ಜನ ನಿಗಾದಲ್ಲಿದ್ದಾರೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು ೩೮೯೨೭ ಸ್ಯಾಂಪಲ್‌ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ ೩೩೯೪೯ ನೆಗಟಿವ್ ಪ್ರಕರಣ, ೩೫೧೨ ಪಾಜಿಟಿವ್ ಪ್ರಕರಣ ಹಾಗೂ ೫೫ ಜನ ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು ೧೧೧೪ ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು ೧೮೭ ಸ್ಯಾಂಪಲ್‌ಗಳು ಮಾತ್ರ ರಿಜೆಕ್ಟ ಆಗಿರುತ್ತವೆ. ಕಂಟೈನ್ಮೆAಟ್ ಝೋನ್ ೧೫೯ ಇದ್ದು, ಇನ್‌ಸ್ಟಿಟ್ಯೂಶನ್ ಕ್ವಾಂರAಟೈನ್‌ನಲ್ಲಿದ್ದ ೮೨೬೭ ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.