೧೪೧ ಜನ ಗುಣಮುಖ, ೧೪೮ ಹೊಸ ಪ್ರಕರಣ, ೩ ಮೃತ ಪ್ರಕರಣ 

೧೪೧ ಜನ ಗುಣಮುಖ, ೧೪೮ ಹೊಸ ಪ್ರಕರಣ, ೩ ಮೃತ ಪ್ರಕರಣ 


ಬಾಗಲಕೋಟೆ ಆ.೨೮: ಜಿಲ್ಲೆಯಲ್ಲಿ ೧೪೧ ಜನ ಕೋವಿಡ್‌ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿAದ ಬಿಡುಗಡೆ ಮಾಡಲಾಗಿದ್ದು, ಹೊಸದಾಗಿ ೧೪೮ ಕೊರೊನಾ ಪ್ರಕರಣಗಳು ಹಾಗೂ ೩ ಮರಣ ಪ್ರಕರಣಗಳು ಗುರುವಾರ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ. 
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು ೫೭೫೮ ಕೋವಿಡ್ ಪ್ರಕರಣಗಳು ದೃಡಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು ೪೮೫೩ ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಡಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ ೨೬, ಬಾದಾಮಿ ೧೬, ಹುನಗುಂದ ೩೩, ಬೀಳಗಿ ೧೮, ಮುಧೋಳ ೨೮, ಜಮಖಂಡಿ ೨೫ ಹಾಗೂ ಬೇರೆ ಜಿಲ್ಲೆಯ ಇಬ್ಬರಿಗೆ ಸೋಂಕು ದೃಡಪಟ್ಟಿದ್ದು, ಅವರನ್ನು  ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.  
ಜಿಲ್ಲಾ ಕೋವಿಡ್ ಲ್ಯಾಬ್‌ನಲ್ಲಿ ಪರಿಕ್ಷಿಸಲಾಗುತ್ತಿದ್ದ ೭೪೪ ಸ್ಯಾಂಪಲ್‌ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಪ್ರತ್ಯೇಕವಾಗಿ ೩೦೯ ಜನ ನಿಗಾದಲ್ಲಿದ್ದಾರೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು ೫೫೩೬೦ ಸ್ಯಾಂಪಲ್‌ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ ೪೮೫೪೯ ನೆಗಟಿವ್ ಪ್ರಕರಣ, ೫೭೫೮ ಪಾಜಿಟಿವ್ ಪ್ರಕರಣ ಹಾಗೂ ೭೨ ಜನ ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು ೮೩೩ ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು ೨೧೪ ಸ್ಯಾಂಪಲ್‌ಗಳು ಮಾತ್ರ ರಿಜೆಕ್ಟ ಆಗಿರುತ್ತವೆ. ಕಂಟೈನ್ಮೆAಟ್ ಝೋನ್ ೫೮೫ ಇದ್ದು, ಇನ್‌ಸ್ಟಿಟ್ಯೂಶನ್ ಕ್ವಾಂರAಟೈನ್‌ನಲ್ಲಿದ್ದ ೮೬೩೮ ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.