ದೀಪಾವಳಿ ಆಚರಣೆ : ಸರಕಾರದ ಮಾರ್ಗಸೂಚಿ ಪಾಲಿಸಲು ಡಿಸಿ ಸೂಚನೆ
ಬಾಗಲಕೋಟೆ:ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸರಕಾರದ ಹೊರಡಿಸಿದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿಗಳು ಆಗಿರುವ ಜಿಲ್ಲಾ ದಂಡಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ.
ಸರಕಾರದ ಆದೇಶ, ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ದ ವಿಪತ್ತು ನಿರ್ವಹಣಾ ಅಧಿನಿಯಮ, ೨೦೦೫ ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಸನ್ ೧೮೮ರ ಅಡಿಯಲ್ಲಿ ಶಿಸ್ತಿನ, ಕಾನೂನು ಕ್ರಮ ಜರುಗಿಸಲಾಗುವುದೆಂದು ಆದೇಶದಲ್ಲಿ ತಿಳಿಸಿದ್ದಾರೆ. ದೀಪಾವಳಿ ಆಚರಣೆಗೆ ಹಸಿರು ಪಟಾಕಿ ಮಾತ್ರ ಮಾರಾಟ ಮಾಡಲು ಅನುಮತಿ ನೀಡಿದ್ದು, ವಾಯುವಿನ ಗುಣಮಟ್ಟದ ಆಧಾರ ಮೇಲೆ ಹಸಿರು ಪಟಾಕಿಗಳನ್ನು ರಾತ್ರಿ ೮ ರಿಂದ ೧೦ ಗಂಟೆವರೆಗೆ ಮಾತ್ರ ಸಿಡಿಸಲು ಅವಕಾಶ ಕಲ್ಪಿಸಲಾಗಿದೆ. ಸವೋಚ್ಚ ನ್ಯಾಯಾಲಯವು ಅನುಮತಿಸಿರುವ ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಇತರೆ ಪಟಾಕಿಗಳನ್ನು ಮಾರಾಟ ಮಾಡತಕ್ಕದ್ದಲ್ಲ ಮತ್ತು ಹಚ್ಚತಕ್ಕದಲ್ಲ.
ಸಂಬAದಪಟ್ಟ ಇಲಾಖೆ, ಪ್ರಾಧಿಕಾರಗಳಿಂದ ಅಧಿಕೃತ ಪರವಾನಿಗೆ ಪಡೆದ ಮಾರಾಟಗಾರರು ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು. ಮಾರಾಟ ಮಳಿಗೆಯನ್ನು ನವೆಂಬರ ೧೬ ವರೆಗೆ ಮಾತ್ರ ತೆರೆಯತಕ್ಕದ್ದು. ಸಾರ್ವಜನಿಕ ವಸತಿ ಸ್ಥಳಗಳಿಂದ ದೂರವಿರುವ ಮೈದಾನ ಅಥವಾ ಬಯಲು ಪ್ರದೇಶಗಳಲ್ಲಿ ಹಸಿರು ಪಟಾಕಿ ಮಾರಾಟ ಮಳಿಗೆಳನ್ನು ಸ್ಥಾಪಿಸಬೇಕು. ಪಟಾಕಿ ಮಳಿಗೆಯಲ್ಲಿ ಎರಡು ಕಡೆಯಿಂದ ಸರಾಗವಾಗಿ ಗಾಳಿಯಾಡುವಂತಿರಬೇಕು. ಎರಡು ಮಳಿಗೆಯ ನಡುವೆ ೬ ಮೀಟರ್ ಅಂತರವಿರಬೇಕು.
ಪಟಾಕಿ ಮಾರಾಟ ಮಳಿಗೆಗಳ ಸುತ್ತಮುತ್ತ ಹಾಗೂ ಪಟಾಕಿ ಖರೀದಿಗೆ ಬರುವ ಸಾರ್ವಜನಿಕರಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕಿçÃನಿಂಗ್ ವ್ಯವಸ್ಥೆ ಕಲ್ಪಿಸುವದರ ಜೊತೆಗೆ ಕನಿಷ್ಠ ೬ ಅಡಿ ಸಾಮಾಜಿಕ ಅಂತರ ಪಾಲನೆ ಹಾಗೂ ಅದನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಗತ್ಯ ಕ್ರಮಕೈಗೊಳ್ಳಬೇಕು. ಮಾರಾಟಗಾರರು ಹಾಗೂ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಖರೀದಿ ಸಂದರ್ಭದಲ್ಲಿ ಜನದಟ್ಟನೆಯಾಗದಂತೆ ಕ್ರಮವಹಿಸಬೇಕು. ಕೋವಿಡ್-೧೯ ಸೋಂಕು ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಸರಕಾರ ಹೊರಡಿಸಿದ ಮಾರ್ಗ ಸೂಚಿಗಳನ್ನು ತಪ್ಪದೇ ಪಾಲಿಸತಕ್ಕದ್ದು.
ತಾತ್ಕಾಲಿಕವಾಗಿ ಪಟಾಕಿ ಸಂಗ್ರಹಣೆ ಮಾಡಿ ಮಾರಾಟ ಮಾಡಲು ಅನುಸರಿಸಬೇಕಾದ ಕ್ರಮ, ಪ್ರತಿಯೊಂದು ಮಳಿಗೆಗಳಲ್ಲಿ ೯ ಲೀಟರ್ ಸಾಮರ್ಥ್ಯದ ವಾಟರ್ ಪ್ರೀಜರ್ ಮಾದರಿ ಅಗ್ನಿನಂದಕ ಹಾಗೂ ಎಡರು ಬಕೀಟ ನೀರು ಇಡಬೇಕು. ಅಡಿಗೆ, ಧೂಮಪಾನಕ್ಕೆ ಅವಕಾಶ ನೀಡಬಾರದೆಂಬ ಸೂಚನಾ ಫಲಕ ಹಾಕಬೇಕು. ಹಗಲಿನ ವೇಳೆಯಲ್ಲಿ ಮಾತ್ರ ಪಟಾಕಿ ಮಾರಾಟ ಮಾಡಬೇಕು. ಪಟಾಕಿ ಹೊರತು ಪಡಿಸಿ ಯಾವುದೇ ಬೆಂಕಿ ತಗಲಬಹುದಾದ ಬಟ್ಟೆ, ಕಟ್ಟಿಗೆ, ಡಾಂಬರು, ಎಣ್ಣೆ ಹಚ್ಚಿದ ಬಟ್ಟೆ ಇತ್ಯಾದಿ ವಸ್ತುಗಳನ್ನು ಇಡಬಾರದು. ಅನುಮತಿ ನೀಡಿದ ಪ್ರಮಾಣಕ್ಕಿಂದ ಹೆಚ್ಚಿನ ಸ್ಪಟಿಕ ವಸ್ತು ಸಂಗ್ರಹಿಸಕೂಡದೆAದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.