ಬಾಗಲಕೋಟೆ: ಜಿಲ್ಲೆಯಲ್ಲಿ ಸೆಪ್ಟೆಂಬರ ೧೫ ರಂದು ಜರುಗಲಿರುವ ಅಂತರರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ೯೫ ಕಿ.ಮೀ ಬೃಹತ್ ಮಾನವ ಸರಪಳಿ ನಿರ್ಮಾಣ ಮಾಡಿ ಏಕಕಾಲದಲ್ಲಿ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮದಲ್ಲಿ ಎಲ್ಲರೂ ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಕೆ.ಎಂ.ಜಾನಕಿ ಮನವಿ ಮಾಡಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಅಂತರರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಕುರಿತು ಪತ್ರಕರ್ತರೊಂದಿಗೆ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ರಾಜ್ಯಾಧ್ಯಂತ ಈ ಕಾರ್ಯಕ್ರಮ ನಡೆಯಲಿದೆ. ಇದರ ಭಾಗವಾಗಿ ಜಿಲ್ಲೆಯಲ್ಲಿ ಆಲಮಟ್ಟಿಯಿಂದ ಸಾಲಹಳ್ಳಿಯವರೆಗೆ ಒಟ್ಟು ೯೫ ಕಿ.ಮೀ ಮಾನವ ಸರಪಳಿ ನಿರ್ಮಿಸಲಾಗುತ್ತಿದೆ. ಸದರಿ ಕಾರ್ಯಕ್ರಮದಲ್ಲಿ ತಾವುಗಳು ಪಾಲ್ಗೊಳ್ಳುವ ಮೂಲಕ ಇತರರು ಪಾಲ್ಗೊಳ್ಳುವಂತೆ ಮಾಡಲು ತಿಳಿಸಿದರು.
ಕಾರ್ಯಕ್ರಮ ಯಶಸ್ವಿಯಾಗಿ ನಿರ್ವಹಿಸಲು ೧೦೦ ಮೀಟರ್‌ಗೆ ಓರ್ವ ಮೇಲ್ವಿಚಾರಕ, ೧ ಕಿ.ಮೀಗೆ ಒಬ್ಬ ತಾಲೂಕಾ ಮಟ್ಟದ ಅಧಿಕಾರಿಗಳನ್ನು ಮೇಲುಸ್ತುವಾರಿ ಅಧಿಕಾರಿಗಳನ್ನಾಗಿ ಹಾಗೂ ೨ ಕಿ.ಮೀಗೆ ಓರ್ವ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಜಿಲ್ಲಾ ನೋಡಲ್ ಅಧಿಕಾರಿಗಳೆಂದು, ೧೦ ಕಿ.ಮೀಗೆ ಕೆ.ಎ.ಎಸ್ ಅಧಿಕಾರಿಗಳನ್ನು ಕಮಾಡೆಂಟ್ ಎಂದು ನೇಮಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಮಾತನಾಡಿ ಸಂವಿಧಾನದಡಿ ಎಲ್ಲರೂ ಸಮಾನರು ಆಗಿರುವದರಿಂದ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಪ್ರತಿಯೊಬ್ಬರೂ ಪಾಲ್ಗೊಂಡು ಒಂದು ಹಬ್ಬದಂತೆ ಆಚರಿಸಬೇಕು. ಜಿಲ್ಲೆಯಲ್ಲಿ ನಿರ್ಮಿಸಲಾಗುತ್ತಿರುವ ಮಾನವ ಸರಪಳಿ ಆಲಮಟ್ಟಿ, ಸೀತಿಮನಿ, ಭಗವತಿ, ಹೊನ್ನಾಕಟ್ಟಿ ಕ್ರಾಸ್, ಕೂಡಲ ಸಂಗಮ ಕ್ರಾಸ್‌ದಿಂದ ಲೋಕಾಪೂರದವರೆ ಇರುವದರಿಂದ ಬಾಗಲಕೋಟೆ ಮತ್ತು ಲೋಕಾಪೂರ ಸ್ಥಳೀಯ ಸಂಸ್ಥೆ ಹೊರತುಪಡಿಸಿ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿಯವರಿಗೆ ಭಾಗವಹಿಸಲು ತಿಳಿಸಲಾಗಿದೆ. ಈ ಕಾರ್ಯದಲ್ಲಿ ಭಾಗವಹಿಸುವ ಜನರಿಗೆ ಎಲ್ಲ ರೀತಿಯ ಅನುಕೂಲ ಮಾಡಿಕೊಡಲು ತಿಳಿಸಲಾಗಿದೆ ಎಂದರು.
ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ ಮಾತನಾಡಿ ಬಾಗಲಕೋಟೆ ಜಿಲ್ಲಾ ಪೊಲೀಸ್ ವತಿಯಿಂದ ಈ ಕಾರ್ಯಕ್ರಮ ಯಶಸ್ವಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಅಪರ ಜಿಲ್ಲಾ ವರಿಷ್ಠಾಧಿಕಾರಿ, ಡಿ.ಎಸ್.ಪಿ, ಸಿಪಿಐ, ಪಿಎಸ್.ಐ ಒಳಗೊಂಡದoತೆ ೪೦೦ ಜನ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಪ್ರತಿ ೧ ಕಿ.ಮೀ ಒಬ್ಬ ಪೊಲೀಸ್, ಪ್ರತಿ ೫ ಕಿ.ಮೀಗೆ ಪಿಎಸ್‌ಐ ನಿಯೋಜನೆಗೊಳಿಸಲಾಗಿದೆ. ಮಾನವ ಸರಪಳಿಯಲ್ಲಿ ೧ ಲಕ್ಷಕ್ಕೂ ಹೆಚ್ಚಿನ ಜನ ಸೇರುವುದರಿಂದ ಸಂಚಾರಕ್ಕೆ, ಸಾರ್ವಜನಿಕರಿಗೆ ತೊಂದರೆಯಾಗದAತೆ ಕ್ರಮವಹಿಸಲಾಗಿದೆ ಎಂದರು. ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸದಾಶಿವ ಬಡಿಗೇರ ಸೇರಿದಂತೆ ಜಿಲ್ಲಾ ಮಟ್ಟದ ಪತ್ರಕರ್ತರು ಉಪಸ್ಥಿತರಿದ್ದರು.