ಬಾಗಲಕೋಟೆ: ಲೋಕಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ಜೂನ್ ೪ ರಂದು ಮತ ಎಣಿಕೆ ನಡೆಯಲಿದ್ದು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮುಂಜಾಗ್ರತಾ ಕ್ರಮವಾಗಿ ಜಿಲ್ಲಾದ್ಯಂತ ಜೂನ್ ೪ರ ಬೆಳಿಗ್ಗೆ ೬ ಗಂಟೆಯಿಂದ ಅದೇ ದಿನ ಮಧ್ಯರಾತ್ರಿಯವರೆಗೆ ೧೪೪ ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಕೆ.ಎಂ.ಜಾನಕಿ ಆದೇಶ ಹೊರಡಿಸಿದ್ದಾರೆ.
ಮತ ಎಣಿಕೆ ಕೇಂದ್ರವಾದ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಐದಕ್ಕಿಂತ ಹೆಚ್ಚಿನ ಜನರ ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ ಬಂದೂಕು, ಚೂರಿ ಲಾಠಿ, ಡೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನುಂಟು ಮಾಡುವ ಮಾರಕಾಸ್ತçಗಳನ್ನು ತೆಗೆದುಕೊಂಡು ಹೋಗುವುದು ಹಾಗೂ ತಿರುಗಾಡುವುದನ್ನು ನಿಷೇಧಿಸಲಾಗಿದೆ. ಕಲ್ಲುಗಳನ್ನು ಮತ್ತು ಕ್ಷಾರಪದಾರ್ಥ ಇಲ್ಲವೇ ಸ್ಪೋಟಕ ವಸ್ತುಗಳು, ಯಾವುದೇ ದಾಹಕ ವಸ್ತುಗಳು ತೆಗೆದುಕೊಂಡು ಹೋಗುವುದು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ.
ಕಲ್ಲುಗಳನ್ನು ಮತ್ತು ಎಸೆಯುವಂತಹ ವಸ್ತುಗಳನ್ನು ಎಸೆಯುವ ಅಥವಾ ಬಿಡುವ ಸಾಧನಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಈ ಸ್ಥಳಗಳಲ್ಲಿ ಬಹಿರಂಗವಾಗಿ ಘೋಷಣೆ, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ.
ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ, ವ್ಯಕ್ತಿಗಳ ತೇಜೋವಧೆ ಮಾಡುವ ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಕಾನೂನು ಮತ್ತು ಸುವ್ಯವಸ್ಥೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.
ಯಾವುದೇ ವ್ಯಕ್ತಿ ಬಹಿರಂಗವಾಗಿ ಮೇಲೆ ವಿವರಿಸಿದ ಮಾರಕಾಸ್ತ್ರಗಳು, ಸ್ಪೋಟಕ ವಸ್ತುಗಳು,ವಿನಾಶಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಂಡು ಬಂದಲ್ಲಿ ವಶಪಡಿಸಿಕೊಳ್ಳುವ ಅಧಿಕಾರಿ ಪೋಲಿಸ್ ಅಧಿಕಾರಿಗಳು ಹೊಂದಿದ್ದು, ಅಂತಹ ಮಾರಕಾಸ್ತ್ರಗಳನ್ನು ಸರಕಾರಕ್ಕೆ ಮುಟ್ಟುಗೋಲು ಮಾಡಿಕೊಂಡು, ಸಂಬAಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರಿತ್ಯ ಕ್ರಮ ಕೈಗೊಳ್ಳಲಾಗುವುದು.
ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ. ಈ ಆದೇಶ ಉಲ್ಲಂಘಿಸಿದವರ ವಿರುದ್ದ ಭಾರತೀಯ ದಂಡ ಸಂಹಿತೆಯ ೧೮೮ರ ಪ್ರಕಾರ ಕ್ರಮ ಜರುಗಿಸಲಾಗುವುದು. ಈ ಆದೇಶವು ಮತ ಎಣಿಕೆ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ, ಪೋಲಿಸ್ ಅಧಿಕಾರಿಗಳಿಗೆ ಹಾಗೂ ಚುನಾವಣಾ ಕಾರ್ಯನಿರತ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.