ಜೂನ್ ೧೫ ವರೆಗೆ ವಿದ್ಯಾರ್ಥಿಗಳಿಗೆ ಬಸ್‌ನಲ್ಲಿ ಉಚಿತ ಪ್ರಯಾಣ

ಜೂನ್ ೧೫ ವರೆಗೆ ವಿದ್ಯಾರ್ಥಿಗಳಿಗೆ ಬಸ್‌ನಲ್ಲಿ ಉಚಿತ ಪ್ರಯಾಣ

ಬಾಗಲಕೋಟೆ: ವಿದ್ಯಾರ್ಥಿ ಬಸ್ ಪಾಸುಗಳನ್ನು ಸೇವಾಸಿಂಧು ತಂತ್ರಾAಶದ ಮುಖಾಂತರ ಸಂಪೂರ್ಣ ಯಾಂತ್ರೀಕೃತವಾಗಿ ವಿತರಣೆ ಮಾಡಲು ಕ್ರಮವಹಿಸುತ್ತಿರುವ ಹಿನ್ನೆಲೆಯಲ್ಲಿ ೨೦೨೩-೨೪ ನೇ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶ ಪಡೆದ ಶಾಲೆ, ಕಾಲೇಜುಗಳ ವಿದ್ಯಾರ್ಥಿಗಳಿಗೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಜೂನ್ ೧೫ ರವರೆಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ಕಳೆದ ಹಲವಾರು ವರ್ಷಗಳಿಂದ ಬಸ್‌ಪಾಸ್ ಪಡೆಯಲು ವಿದ್ಯಾರ್ಥಿಗಳು ನಿಗದಿತ ನಮೂನೆಯಲ್ಲಿ ಮುದ್ರಿತ ಅಥವ ಕೈ ಬರಹದ ಅರ್ಜಿ ಮೂಲಕ ವಾಸ ಸ್ಥಳ, ಪ್ರವೇಶ ಪಡೆದ ತರಗತಿ, ಶಿಕ್ಷಣ ಸಂಸ್ಥೆ ಹಾಗೂ ಪ್ರಯಾಣದ ಮಾರ್ಗದ ವಿವರಗಳನ್ನು ಸಲ್ಲಿಸಬೇಕಾಗಿತ್ತು. ಅದನ್ನು ಸಾರಿಗೆ ಸಂಸ್ಥೆಯ ಅಧಿಕಾರಿಗಳು ಪರಿಶೀಲಿಸಿ ಕೈ ಬರಹದ ಬಸ್ ಪಾಸ್ ನೀಡಲಾಗುತ್ತಿತ್ತು. ಕಳೆದ ಎರಡು ವರ್ಷಗಳಿಂದ ವಿದ್ಯಾರ್ಥಿಗಳು ಸೇವಾಸಿಂಧು ತಂತ್ರಾAಶದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ, ಸಾರಿಗೆ ಸಂಸ್ಥೆಯಿAದ ಕೈ ಬರಹದ ಬಸ್ ಪಾಸ ವಿತರಣೆ ಮಾಡುವ ಪ್ರಕ್ರಿಯೆ ಜಾರಿಯಲ್ಲಿದೆ. 
ಪ್ರಸಕ್ತ ವರ್ಷದಲ್ಲಿ ಅಂದರೆ ೨೦೨೩-೨೪ ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳಿಗೆ ಉಚಿತ, ರಿಯಾಯಿತಿ ಬಸ್ ಪಾಸುಗಳನ್ನು ಸೇವಾಸಿಂಧು ತಂತ್ರಾAಶದ ಮುಖಾಂತರ ಸಂಪೂರ್ಣ ಯಾಂತ್ರೀಕೃತವಾಗಿ ವಿತರಣೆ ಮಾಡಲು ಕ್ರಮವಹಿಸಲಾಗುತ್ತಿದೆ. ಅದಕ್ಕಾಗಿ ಇಡಿಸಿಎಸ್ ನಿರ್ದೇಶನಾಲಯವು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಆದ್ದರಿಂದ ವಿದ್ಯಾರ್ಥಿಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆಗೆ ಮತ್ತು ಪಾಸು ಪಡೆಯಲು ಕಾಲಾವಕಾಶ ನೀಡಬೇಕಾಗಿರುತ್ತದೆ. 
ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ಹಾಗೂ ಅವರ ಶೈಕ್ಷಣಿಕ ಚಟುವಟಿಕೆಗಳಿಗೆ ಯಾವುದೇ ಅನಾನುಕೂಲವಾಗದಂತೆ ಕ್ರಮ ವಹಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ಶಿಕ್ಷಣ ಸಂಸ್ಥೆಗೆ ಹೋಗಿ ಬರಲು ಜೂ.೧೫ ರವರೆಗೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ೨೦೨೩-೨೪ ನೇ ಸಾಲಿನಲ್ಲಿ ಶಾಲೆ, ಕಾಲೇಜುಗಳಿಗೆ ಪ್ರವೇಶ ಪಡೆದಿರುವ ಸಂಬAಧದ ಶುಲ್ಕ ಪಾವತಿ ರಸೀದಿ ಅಥವಾ ೨೦೨೨-೨೩ ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ತೋರಿಸಿ, ಸಂಸ್ಥೆಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.