ಎಚ್‌ಎಸ್‌ಕೆಯಲ್ಲಿ ತಂಬಾಕು ವ್ಯಸನ ಮುಕ್ತ ಕೇಂದ್ರ ಸ್ಥಾಪನೆ

ಎಚ್‌ಎಸ್‌ಕೆಯಲ್ಲಿ ತಂಬಾಕು ವ್ಯಸನ ಮುಕ್ತ ಕೇಂದ್ರ ಸ್ಥಾಪನೆ


ಬಾಗಲಕೋಟೆ: ಬಿವಿವಿ ಸಂಘದ ಎಸ್. ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಹಾನಗಲ್ಲ ಶ್ರೀ ಕುಮಾರೇಶ್ವರ ಆಸ್ಪತ್ರೆಯ ಹೊರರೋಗಿಗಳ ವಿಭಾಗದಲ್ಲಿ ಸ್ಥಾಪನೆಗೊಂಡಿರುವ ತಂಬಾಕು ವ್ಯಸನ ಮುಕ್ತ ಕೇಂದ್ರವನ್ನು ಉದ್ಘಾಟಿಸಲಾಯಿತು.
ತಂಬಾಕು ಸೇವನೆಯನ್ನು ತಡೆಗಟ್ಟಲು ಮತ್ತು ಸಾರ್ವಜನಿಕ ಆರೋಗ್ಯವನ್ನು ಉತ್ತೇಜಿಸಲು ರಾಷ್ಟçದಾದ್ಯಂತÀ ವೈದ್ಯಕೀಯ ಸಂಸ್ಥೆಗಳಲ್ಲಿ ತಂಬಾಕು ವ್ಯಸನ ಮುಕ್ತ ಕೇಂದ್ರಗಳನ್ನು ಸ್ಥಾಪಿಸಲು ಏಕಕಾಲಕ್ಕೆ ಉದ್ಘಾಟನೆಗೊಂಡಿವೆ.  ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ. ನಡ್ಡಾ, ದೆಹಲಿಯಲ್ಲಿ ಕೇಂದ್ರವನ್ನು ಉದ್ಘಾಟಿಸಿದ್ದು, ಅದೇ ಸಮಯಕ್ಕೆ ಬಾಗಲಕೋಟೆಯ ಬಿವಿವಿ ಸಂಘದ ಎಸ್. ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದ ಹಾನಗಲ್ಲ ಶ್ರೀ ಕುಮಾರೇಶ್ವರ ಆಸ್ಪತ್ರೆಯಲ್ಲಿಯೂ ಕೇಂದ್ರವನ್ನು ಉದ್ಘಾಟಿಸಲಾಯಿತು. 
ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಭುವನೇಶ್ವರಿ ಸಿ. ಯಳಮಲಿ, ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಡಾ. ಶ್ರೀರಾಮ ಕೋರಾ, ಮಾನಸಿಕ ರೋಗ ವಿಭಾಗದ ಮುಖ್ಯಸ್ಥ  ಡಾ. ನಾರಾಯಣ ಮುತಾಲಿಕ, ನೋಡಲ್ ಆಫೀಸರ್ ಡಾ. ವಿನೋದ ಅಕ್ಕಸಾಲಿ, ತಂಬಾಕು ವ್ಯಸನ ಮುಕ್ತ ಕೇಂದ್ರ ಮೇಲ್ವಿಚಾರಕ ಡಾ.ಅಶೋಕ ಡೋರ್ಲೆ, ವೈದ್ಯಕೀಯ ಮಹಾವಿದ್ಯಾಲಯದ ವಿವಿಧ ವಿಭಾಗಗಳ ಮುಖ್ಯಸ್ಥರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.