೨೩ ರಂದು ಕೂಡಲಸಂಗಮಕ್ಕೆ ರಾಹುಲ್ ಗಾಂಧಿ..?
ಬಾಗಲಕೋಟೆ:
ಲಿಂಗಾಯತ ಮತಗಳನ್ನು ಶತಾಗತಾಯಗ ಳಿಸಿಕೊಳ್ಳಲು ಯತ್ನಿಸುತ್ತಿರುವ ಕಾಂಗ್ರೆಸ್ ಪಕ್ಷ ಏ.೨೩ರ ಬಸವಜಯಂತಿಯನ್ನು ಕೂಡಲ ಸಂಗಮದಲ್ಲಿ ಆಚರಿಸಲು ತೀರ್ಮಾನಿಸಿದೆ. ಅದಕ್ಕಾಗಿ ಪಕ್ಷದ ವರಿಷ್ಠ ರಾಹುಲ್ ಗಾಂಧಿ ಅವರನ್ನು ಕೂಡಲಸಂಗಮಕ್ಕೆ ಕರೆತರುವ ಪ್ರಯತ್ನದಲ್ಲಿದೆ.
ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಏ.೨೩ರಂದು ರಾಹುಲ್ ಗಾಂಧಿ ವಿಜಯಪುರ ಜಿಲ್ಲೆಗೆ ಆಗಮಿಸಲಿದ್ದು, ಅದೇ ದಿನ ಕೂಡಲಸಂಗಮಕ್ಕೆ ಕರೆತಂದು ವಿಶೇಷ ಪೂಜೆ ಸಲ್ಲಿಸುವ ಸಿದ್ಧತೆಯಲ್ಲಿ ಅವಳಿ ಜಿಲ್ಲೆಯ ನಾಯಕರಿದ್ದಾರೆ. ಅದರಲ್ಲೂ ಎಂ.ಬಿ.ಪಾಟೀಲ ಅವರು ಹೆಚ್ಚು ಉತ್ಸುಕರಾಗಿದ್ದಾರೆ ಎಂದು ತಿಳಿದು ಬಂದಿದೆ.
ಅಂದು ಕೂಡಲಸಂಗಮದ ಬಸವಣ್ಣನವರ ಐಕ್ಯ ಮಂಟಪದಲ್ಲಿ ವಿಶೇಷ ಪೂಜೆ ಸಲ್ಲಿಸಿ ಕೂಡಲ ಸಂಗಮಲ್ಲಿ ಐದು ಸಾವಿರ ಆಸನಗಳ ವ್ಯವಸ್ಥೆಯುಳ್ಳ ಬೃಹತ್ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಸಲು ಸಿದ್ಧತೆ ಕೈಗೊಳ್ಳಲಾಗಿದ್ದು, ಈ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳುವುದು ಬಾಕಿಯಿದೆ.