ಸೋಮವಾರ ಮಲ್ಲಿಕರ್ಜುನ ಚರಂತಿಮಠ ನಾಮಪತ್ರ ಸಲ್ಲಿಕೆ
ಬಾಗಲಕೋಟ : ಪ್ರಸಕ್ತ ಬಾಗಲಕೋಟ ವಿಧಾನಸಭೆ ಮತಕ್ಷೇತ್ರಕ್ಕೆ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಯುವ ಮುಖಂಡ ಮಲ್ಲಿಕಾರ್ಜುನ ಚರಂತಿಮಠ ಅವರು ಏ. ೧೭ರಂದು ಬೆಳಗ್ಗೆ ೧೦-೩೦ರಿಂದ ೧೧ ಗಂಟೆಯೊಳಗೆ ಶುಭ ಮುಹೂರ್ತದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.
ಅಂದು ಸರಳವಾಗಿ ನಾಮಪತ್ರ ಸಲ್ಲಿಕೆಯಾಗಲಿದ್ದು, ಏ.೧೯ರಂದು ಕ್ಷೇತ್ರದ ಸಾವಿರಾರು ಕಾರ್ಯಕರ್ತರೊಂದಿಗೆ ನಗರದಲ್ಲಿ ಬೃಹತ್ ಪಾದಯಾತ್ರೆ ನಡೆಸಿ, ಮೆರವಣಿಗೆ ಮೂಲಕ ಚುನಾವಣಾಧಿಕಾರಿಗಳ ಕಚೇರಿಗೆ ತೆರಳಿ ಮತ್ತೊಂದು ನಾಮಪತ್ರ ಸಲ್ಲಿಸಲಾಗುವುದು ಎಂದು ಮುಖಂಡರಾದ ಸಂತೋಷ ಹೊಕ್ರಾಣಿ, ವಿಜಯ ಸುಲಾಖೆ, ರವಿ ಕುಮಟಗಿ, ಅಶೋಕ ಮುತ್ತಿನಮಠ, ಬಸು ಕಟಗೇರಿ ಮುಂತಾದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.