ನನ್ನ ಅಭಿವೃದ್ಧಿ ಕಾರ್ಯಗಳೇ ಗೆಲುವಿಗೆ ಶ್ರೀರಕ್ಷೆ: ಗದ್ದಿಗೌಡರ
ಬಾಗಲಕೋಟೆ: ಬಾಗಲಕೋಟೆ ಬಿಜೆಪಿಯ ಭದ್ರಕೋಟೆಯಾಗಿದ್ದು ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗುವುದು ನಿಶ್ಚಿತ ಎಂದು ಸಂಸದ ಪಿ.ಸಿ.ಗದ್ದಿಗೌಡರ ಹೇಳಿದರು.
ನಗರದ ಬಸವೇಶ್ವರ ಮಂಗಲ ಕಾರ್ಯಾಲಯದಲ್ಲಿ ಭಾರತೀಯ ಜನತಾ ಪಕ್ಷದಿಂದ ಹಮ್ಮಿಕೊಂಡಿದ್ದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚುನಾವಣಾ ಪೂರ್ವ ತಯಾರಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಜಿಲ್ಲೆಯಲ್ಲಿ ಆಗಿರುವ ಅನೇಕ ಅಭಿವೃದ್ಧಿಯ ಪರ ಕೆಲಸಗಳ ಬಗ್ಗೆ ನನಗೆ ತೃಪ್ತಿಯಿದೆ, ನಾನು ವಿವಿಧ ಯೋಜನೆಗಳ ಮೂಲಕ ಬೇರೆ ಬೇರೆ ಹಂತದಲ್ಲಿ ನನ್ನದೆಯಾದ ಪ್ರಮಾಣಿಕ ಕೊಡುಗೆ ನೀಡಿದ್ದೇನೆ, ನಾನು ಮಾಡಿದ ಕೆಲಸಗಳು ಜನರಿಗೆ ತಲುಪಿವೆ, ಸ್ವಾತಂತ್ರö್ಯದ ನಂತರ ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಪರ ಯೋಜನೆಗಳಿಂದಾಗಿ ಜಗತ್ತು ಭಾರತದತ್ತ ತಿರುಗಿ ನೋಡುತ್ತಿದೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದೆ ಗೆಲ್ಲುವ ವಿಶ್ವಾಸವಿದೆ ಎಂದರು.
ಮಾಜಿ ಶಾಸಕ ಡಾ. ವೀರಣ್ಣ ಚರಂತಿಮಠ ದೇಶದ ಭದ್ರತೆಗಾಗಿ ಮೋದಿ ಅವಶ್ಯವಾಗಿದ್ದು. ನಿಜ ಭಾರತದ ಕನಸು ನನಸಾಗಲು ಕೇಂದ್ರದಲ್ಲಿ ಬಿಜಿಪಿ ಅಧಿಕಾರಕ್ಕೆ ಬಂದು ಮತ್ತೊಮ್ಮೆ ನರೇಂದ್ರ ಮೋದಿಯವರ ಪ್ರಧಾನಿಯಾಗಬೇಕು ಆ ನೀಟ್ಟಿನಲ್ಲಿ ಬಿಜೆಪಿ ಕಾರ್ಯಕರ್ತರು ಚುನಾವಣೆಯಲ್ಲಿ ಕಾರ್ಯ ನಿರ್ವಹಿಸಬೇಕಿದೆ ಎಂದರು.
ಸಭೆಯಲ್ಲಿ ಬೆಳಗಾವಿ ವಿಭಾಗಿಯ ಸಹ ಪ್ರಭಾರಿ ಬಸವರಾಜ ಯಂಕAಚಿ, ಗ್ರಾಮೀಣ ಮಂಡಲ ಅಧ್ಯಕ್ಷ ಸುರೇಶ ಕೊಣ್ಣೂರ, ನಗರ ಮಂಡಲ ಅಧ್ಯಕ್ಷ ಬಸವರಾಜ ಹುನಗುಂದ, ಮುಖಂಡರಾದ ಜಿ.ಎನ್. ಪಾಟೀಲ, ಲಕ್ಷಿö್ಮÃನಾರಾಯಣ ಕಾಸಟ್, ಅಶೋಕ ಲಿಂಬಾವಳಿ, ರಾಜು ರೇವಣಕರ, ಜಯಂತ ಕುರಂದವಾಡ, ಸತ್ಯನಾರಾಯಣ ಹೇಮಾದ್ರಿ, ಕುಮಾರ ಯಳ್ಳಿಗುತ್ತಿ, ಶಿವಾನಂದ ಟವಳಿ, ಶಿವಪುತ್ರಪ್ಪ ಕಣಗಿ, ಸಂಗಣ್ಣ ಕಲಾದಗಿ, ಬಸವರಾಜ ಅವರಾದಿ, ಸದಾನಂದ ನಾರಾ, ವೀರಣ್ಣ ಹಳೆಗೌಡರ, ರಾಮಣ್ಣ ಜುಮನಾಳ, ಮಲ್ಲೇಶ ವಿಜಾಪುರ, ಕಲ್ಲಪ್ಪ ಭಗವತಿ, ಸುಜಾತಾ ತತ್ರಾಣಿ, ಶಿವಲೀಲಾ ಪಟ್ಟಣಶೆಟ್ಟಿ, ಶಶಿಕಲಾ ಮಜ್ಜಿಗೆ ,ಶೋಭಾ ರಾವ್, ಸುಜಾತಾ ಶಿಂಧೆ, ಸವಿತಾ ಲಂಕೆನ್ನವರ, ಸಂಗಯ್ಯ ಸರಗಣಾಚಾರಿ, ಸಿ.ವಿ.ಕೋಟಿ, ಉಮೇಶ ಹಂಚಿನಾಳ ಸೇರಿದಂತೆ ನಗರ ಹಾಗೂ ಗ್ರಾಮೀಣ ಕಾರ್ಯಕರ್ತರು ಭಾಗಹಿಸಿದ್ದರು.