ಹಿಂಜಾವೇ ಜಿಲ್ಲಾ ಕಾರ್ಯದರ್ಶಿ ಮಹಾಂತೇಶ ಕಸ್ತೂರಿ ನಿಧನ 

ಹಿಂಜಾವೇ ಜಿಲ್ಲಾ ಕಾರ್ಯದರ್ಶಿ ಮಹಾಂತೇಶ ಕಸ್ತೂರಿ ನಿಧನ 


ಬಾಗಲಕೋಟೆ:ಹಿಂದೂ ಜಾಗರಣ ವೇದಿಕೆ ಜಿಲ್ಲಾ ಕಾರ್ಯದರ್ಶಿ ಮಹಾಂತೇಶ ಕಸ್ತೂರಿ(೩೬) ಮಂಗಳವಾರ ಮಧ್ಯಾಹ್ನ ಹೃದಯಾಘಾತದಿಂದ ನಿಧನ ಹೊಂದಿದರು. 


 ತಾಯಿ, ಪತ್ನಿ, ಇಬ್ಬರು ಮಕ್ಕಳು, ಸಹೋದರ, ಇಬ್ಬರು ಸಹೋದರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಮಹಾಂತೇಶ ಅಗಲಿದ್ದಾರೆ. ರಾಷ್ಟಿçÃಯ ಸ್ವಯಂ ಸೇವಕ ಸಂಘದ ನಿಷ್ಠಾವಂತ ಕಾರ್ಯಕರ್ತರಾಗಿದ್ದ ಮಹಾಂತೇಶ ಖಾಸಗಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಎಲ್ಲರೊಂದಿಗೆ ಆತ್ಮೀಯವಾಗಿ ಬೆರೆಯುವ ಗುಣ, ಸಂಘಟನೆಗಾಗಿ ಪ್ರತಿನಿತ್ಯವೂ ಸಮಯ ನೀಡುತ್ತಿದ್ದ ಅವರು ಅಪಾರ ಪ್ರಮಾಣದಲ್ಲಿ ಸ್ನೇಹಿತರನ್ನು ಹೊಂದಿದ್ದರು.

 
 ರಾಷ್ಟಿçÃಯ ಸ್ವಯಂ ಸೇವಕ ಸಂಘದ ಪಥಸಂಚಲನದಲ್ಲಿ ಘೋಷ ಪ್ರಮುಖರಾಗಿ ಗಮನಸೆಳೆದಿದ್ದ ಅವರು ಶಾರೀರಿಕ ಪ್ರಮುಖ್ ಸೇರಿದಂತೆ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ ಇತ್ತೀಚೆಗೆ ಹಿಂದೂ ಜಾಗರಣ ವೇದಿಕೆಯಲ್ಲಿ ಕ್ರಿಯಾಶೀಲರಾಗಿದ್ದರು. ಅವರ ಅಕಾಲಿಕ ಮರಣದಿಂದಾಗಿ ಸಂಘಪರಿವಾರದ ವಲಯದಲ್ಲಿ ನೀರವ ಮೌನ ಆವರಿಸಿದೆ. ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ, ಜಿಲ್ಲಾ ಸಂಘಚಾಲಕ ಡಾ.ಸಿ.ಎಸ್.ಪಾಟೀಲ ಸೇರಿದಂತೆ ಗಣ್ಯರು ಮಹಾಂತೇಶ ಕಸ್ತೂರಿ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.