ನೋಂದಣಿ ಕಚೇರಿಗಳಲ್ಲಿ anywhere ನೋಂದಣಿ ವ್ಯವಸ್ಥೆ ಜಾರಿ 

ನೋಂದಣಿ ಕಚೇರಿಗಳಲ್ಲಿ anywhere  ನೋಂದಣಿ ವ್ಯವಸ್ಥೆ ಜಾರಿ 


ಬಾಗಲಕೋಟೆ : ಪ್ರಸಕ್ತ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಿರುವಂತೆ ಸ್ಥಿತಾಸ್ಥಿಯನ್ನು ಜಿಲ್ಲೆಯ ಯಾವುದೇ ಉಪ ನೋಂದಣಿ ಕಚೇರಿಯಲ್ಲಿ ನೋಂದಣಿ ಮಾಡಲು ಅನುಕೂಲವಾಗುವಂತೆ ಎನಿವೇರ್ ನೋಂದಣಿ ವ್ಯವಸ್ಥೆ ಜಾರಿಗೆ ತರಲಾಗಿದೆ ಎಂದು ಜಿಲ್ಲಾ ನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 ನೋಂದಣಿ ಕಾಯ್ದೆ-೧೯೦೮ರ ಕಲಂ (೫) ಹಾಗೂ ಕಲಂ(೬) ರಂತೆ ೨೦೧೧ರಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಮತ್ತು ಕಳೆದ ಮಾರ್ಚ ಮಾಹೆಯಲ್ಲಿ ತುಮಕೂರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಈ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಜಾರಿಗೆ ತರಲಾಗಿತ್ತು. ಅಲ್ಲಿ ಯಶಸ್ವಿಯಾಗಿರುವ ಹಿನ್ನಲೆಯಲ್ಲಿ ಇದೀಗ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ಬಾಗಲಕೋಟೆ ಜಿಲ್ಲಾ ಘಟಕವನ್ನು ಒಂದು ಯುನಿಟ್ ಎಂದು ಪರಿಗಣಿಸಿ ಈ ಜಿಲ್ಲೆಯ ಎಲ್ಲ ಉಪ ನೋಂದಣಿ ಕಚೇರಿಗಳಿಗೂ ವಿಸ್ತರಿಸಿ ಸರ್ಕಾರ ಆದೇಶಿಸಿದೆ.
 ಪ್ರಸ್ತುತ ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪ ನೋಂದಣಿ ಕಚೇರಿಯಲ್ಲಿ ಮಾತ್ರ ದಸ್ತಾವೇಜನ್ನು ನೋಂದಣಿ ಮಾಡಲು ಅವಕಾಶವಿದೆ. ಎನಿವೇರ್ ನೋಂದಣಿ ವ್ಯವಸ್ಥೆ ಜಾರಿಯಿಂದ ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪ ನೋಂದಣಿ ಕಚೇರಿಯಲ್ಲಿ ದಸ್ತಾವೇಜು ನೋಂದಾಯಿಸಿಕೊಳ್ಳಬಹುದಾಗಿದೆ. ಸಾರ್ವಜನಿಕರು ಎನಿವೇರ್ ನೋಂದಣಿ ವ್ಯವಸ್ಥೆಯ ಸದುಪಯೋಗ ಪಡಿಸಿಕೊಂಡು ತಮಗೆ ಹತ್ತಿರದ ಅಥವಾ ನೋಂದಣಿಗೆ ಸ್ಲಾಟ್ ಲಭ್ಯವಿರುವಂತಹ ಕಚೇರಿ ಆಯ್ಕೆ ಮಾಡಿಕೊಂಡು ದಸ್ತಾವೇಜನ್ನು ನೋಂದಾಯಿಸಿಕೊಳ್ಳಬೇಕೆAದು ಜಿಲ್ಲಾ ನೋಂದಣಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.
 ಎನಿವೇರ್ ನೋಂದಣಿ ವ್ಯವಸ್ಥೆಯು ಸಾರ್ವಜನಿಕರಿಗೆ ಹಲವಾರು ರೀತಿಯಲ್ಲಿ ಉಪಯುಕ್ತವಾಗಿದ್ದು, ನೋಂದಣಿ ಪ್ರಕ್ರಿಯೆ ಸುಲಭವಾಗುವುದಲ್ಲದೇ ಸಮಯವು ಸಹ ಉಳಿತಾಯವಾಗಲಿದೆ. ನೋಂದಣಿಯಲ್ಲಿ ಪಾರದರ್ಶಕತೆ ಹೆಚ್ಚಲಿದ್ದು, ವಿಳಂಬವನ್ನು ತಡೆಗಟ್ಟಲಿದೆ. ಸಾರ್ವಜನಿಕರು ಸ್ಲಾಟ್ ಲಭ್ಯವಿರುವಂತಹ ಸಮೀಪದ ನೋಂದಣಿ ಕಚೇರಿಯನ್ನು ಆಯ್ಕೆ ಮಾಡಿಕೊಂಡು ದಸ್ತಾವೇಜನ್ನು ನೋಂದಾಯಿಸಬಹುದು. ಈ ನೂತನ ವ್ಯವಸ್ಥೆಯನ್ನು ಸಾರ್ವಜನಿಕರು ಸದುಪಯೋಗ ಪಡೆದಿಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.