ಬಾಗಲಕೋಟೆ: ಮಹಿಳಾ ಸಬಲೀಕರಣಕ್ಕಾಗಿ ಹಾಗೂ ಸ್ವಾವಲಂಬಿ ಬದುಕಿಗಾಗಿ ಮೊಬೈಲ್ ಕ್ಯಾಂಟೀನ್ ನಡೆಸುವದಲ್ಲದೇ ತಾಲೂಕಿಗೆ ಒಂದು ಸೂಪರ್ ಮಾರ್ಕೆಟ್ ಮಾಡುವ ಚಿಂತನೆ ನಡೆಸಲಾಗಿದೆ ಎಂದು ಜಿ.ಪಂ ಮುಖ್ಯ ಕಾರ್ಯನಿವಾಹಕ ಅಧಿಕಾರಿ ಶಶಿಧರ ಕುರೇರ್ ಹೇಳಿದರು.
ಬುಧವಾರ ದೀನ್ ದಯಾಳ್ ಅಂತ್ಯೋದಯ ಯೋಜನೆ, ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಅಭಿಯಾನ ಯೋಜನೆಯಡಿಯಲ್ಲಿ ಲಕ್ಷಿö್ಮà ಸ್ತಿçÃಶಕ್ತಿ ಮಹಿಳಾ ಸ್ವಸಹಾಯ ಸಂಘದಿAದ ಗದ್ದನಕೇರಿ ಕ್ರಾಸ್‌ನಲ್ಲಿ ಸಂಜೀವಿನಿ ಕ್ಯಾಂಟಿನ್ ಉದ್ಘಾಟಿಸಿ ಮಾತನಾಡಿದ ಅವರು ಸಂಜೀವಿನಿ ಅಭಿಯಾನದಡಿ ಸೂಪರ್ ಪಾಸ್ಟ್ ಫುಡ್ ಮೊಬೈಲ್ ಕ್ಯಾಂಟೀನ್ ಆರಂಭಿಸಲಾಗಿದ್ದು, ಇದರಿಂದ ಮಹಿಳೆಯರಿಗೆ ಸ್ವಾವಲಂಭಿ ಬದುಕು ಸಾಗಿಸಲು ಸಾಧ್ಯವಾಗುತ್ತದೆ. ಅವರು ಯಾವ ಕ್ಷೇತ್ರದಲ್ಲಿ ಪರಿಣಿತರಾಗಿದ್ದಾರೆ ಎಂಬುದನ್ನು ಪರಿಗಣಿಸಿ ಸೂಕ್ತ ತರಬೇತಿ ನೀಡಿ ಆಹಾರ ತಯಾರಿಕೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡಲಾಗುತ್ತಿದೆ ಎಂದು ಹೇಳಿದರು.
ಪ್ರಾಯೋಗಿಕವಾಗಿ ಈಗಾಗಲೇ ಜಿಲ್ಲಾಡಳಿತ ಭವನದ ಆವರಣದಲ್ಲಿ ಕ್ಯಾಂಟೀನ್ ಪ್ರಾರಂಭಿಸಲಾಗಿದ್ದು, ಇದು ಸ್ತಿçà ಸ್ವ-ಸಹಾಯ ಗುಂಪುಗಳಿಗೆ ಸಹಕಾರಿಯಾಗಲಿದೆ. ಈ ಕಾರ್ಯ ಯಶಸ್ವಿಗೊಂಡರೆ ಮುಂದಿನ ದಿನಗಳಲ್ಲಿ ಬೇರೆ ಬೇರೆ ಆಹಾರ ಪದಾರ್ಥ ಉತ್ಪಾದಿಸುವ ಹಾಗೂ ಸ್ವಯಂ ಪ್ರೇರಿತವಾಗಿ ಉತ್ಸಾಹದಿಂದ ಮುಂದೆ ಬರುವ ಸ್ವ-ಸಹಾಯ ಸಂಘದ ಸದಸ್ಯರಿಗೆ ಪ್ರತಿ ತಾಲೂಕಾ ಕೇಂದ್ರಗಳಲ್ಲೊAದು ಸೂಪರ್ ಮಾರ್ಕೆಟ್ ಪ್ರಾರಂಭಿಸಲಾಗುವುದು ಎಂದರು.
ಮಹಿಳೆಯರು ಇಂತಹ ಕಾರ್ಯಗಳಲ್ಲಿ ತೊಡಗಿಸಿಕೊಂಡಾಗ ಸ್ವತಂತ್ರ ಹಾಗೂ ಸ್ವಾವಲಂಭಿ ಬದುಕು ಸಾಗಿಸಲು ಸಾಧ್ಯವಾಗುತ್ತದೆ. ಕಾರ್ಯಕ್ರಮದಲ್ಲಿ ಯಡಹಳ್ಳಿ ಗ್ರಾಮ ಪಂಚಾಯತ ಅಧ್ಯಕ್ಷೆ ಮಾಲಾ ಸಂಗಪ್ಪ ನಾಲತ್ವಾಡ, ಉಪಾಧ್ಯಕ್ಷೆ ದ್ರಾಕ್ಷಾಯಿಣಿ ಮಾದರ, ಜಿ.ಪಂ ಉಪಕಾರ್ಯದರ್ಶಿ ಅಮರೇಶ ನಾಯಕ, ಸಹಾಯಕ ಯೋಜನಾಧಿಕಾರಿ ಭೀಮಪ್ಪ ತಳವಾರ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಎಂ.ರೇವಡಿ ಸೇರಿದಂತೆ ಜಿಲ್ಲಾ ಹಾಗೂ ತಾಲೂಕಿನ ಎನ್.ಆರ್.ಎಲ್.ಎಂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕ್ಯಾಂಟಿನ್‌ನಲ್ಲಿ ಚಹಾ ಸವಿದ ಸಿಇಓ
ಗದ್ದನಕೇರಿ ಕ್ರಾಸ್ ಬಳಿ ಹೊಸದಾಗಿ ಪ್ರಾರಂಭಿಸಲಾದ ಸಂಜೀವಿನಿ ಕ್ಯಾಂಟೀನ್‌ಗೆ ಜಿ.ಪಂ ಸಿಇಓ ಶಶೀಧರ ಕುರೇರ್ ಚಾಲನೆ ನೀಡಿ, ಆಹಾರ ತಯಾರಿಕೆಯಲ್ಲಿ ಗುಣಮಟ್ಟ ಕಾಯ್ದುಕೊಂಡು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದರು. ಸ್ವತಃ ಹಣ ನೀಡಿ ಕ್ಯಾಂಟೀನ್‌ನಲ್ಲಿ ಚಹಾ ಸವಿದರು.
ರಿದ್ದರು.