ಪ್ರವಾಸೋದ್ಯಮ ಇಲಾಖೆ ಹಣ ಅಕ್ರಮ ವರ್ಗಾವಣೆ..!

* ಬ್ಯಾಂಕ್ ವ್ಯವಸ್ಥಾಪಕನ ಮೇಲೆ ದೂರು ದಾಖಲು  * IDBI ಬ್ಯಾಂಕ್‌ನಲ್ಲಿದ್ದ ಹಣ 

ಪ್ರವಾಸೋದ್ಯಮ ಇಲಾಖೆ ಹಣ ಅಕ್ರಮ ವರ್ಗಾವಣೆ..!
ಬಾಗಲಕೋಟೆ: ಪ್ರವಾಸೋದ್ಯಮ ಇಲಾಖೆ ಇರಿಸಿದ್ದ ಹಣವನ್ನು ಬ್ಯಾಂಕ್ ಸಿಬ್ಬಂದಿ ದುರುಪಯೋಗಪಡಿಸಿಕೊಂಡಿರುವ ಘಟನೆ ನಡೆದಿದೆ. 
ನಗರದ  IDBI ಬ್ಯಾಂಕ್‌ನಲ್ಲಿ ಪ್ರವಾಸೋದ್ಯಮ ಇಲಾಖೆ ಇರಿಸಿದ್ದ ೨.೪೭ ಕೋಟಿ ರೂ. ಹಣವನ್ನು ಅಕ್ರಮವಾಗಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಅಧ್ಯಕ್ಷರ ಹೆಸರಿನಲ್ಲಿ  ಖಾತೆ ತೆರೆದು ವರ್ಗಾವಣೆ ಮಾಡಿ ವಂಚಿಸಿರುವ ಬಗ್ಗೆ ಪ್ರವಾಸೋದ್ಯಮ ಇಲಾಖೆ ಅಧಿಕಾರಿ ಗೋಪಾಲ ಹಿತ್ತಲಮನಿ ಎಂಬುವವರು ಬಾಗಲಕೋಟೆ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 
೨೦೨೧ರ ಅಕ್ಟೋಬರ್ ೨೮ ರಿಂದ ೨೦೨೪ರ ಫೆಬ್ರುವರಿ ೨೨ರ ಅವಧಿಯಲ್ಲಿ ಅಕ್ರಮವಾಗಿ ಇಲಾಖೆ ಹಣವನ್ನು ವಿವಿಧ ಮೂರು ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ ಎಂದು ಬಾಗಲಕೋಟೆ ಶಾಖೆಯ IDBI ಮ್ಯಾನೇಜರ್ ಸೇರಿ ಸಿಬ್ಬಂದಿ ಮೇಲೆ ದೂರು ದಾಖಲಿಸಿದ್ದಾರೆ. ದೂರು ಆಧರಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.