ಲೋಕಸಭೆ ಚುನಾವಣೆ: ಬಾಗಲಕೋಟೆ ಕ್ಷೇತ್ರದಲ್ಲಿ ೨ ಲಕ್ಷ ಅಂತರದ ಗೆಲವು..!

ಲೋಕಸಭೆ ಚುನಾವಣೆ: ಬಾಗಲಕೋಟೆ ಕ್ಷೇತ್ರದಲ್ಲಿ ೨ ಲಕ್ಷ ಅಂತರದ ಗೆಲವು..!
ಬಾಗಲಕೋಟೆ:  ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಾಗಲಕೋಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನು ಕನಿಷ್ಠ ೨ ಲಕ್ಷ ಮತಗಳ ಅಂತರದಿAದ ಗೆಲ್ಲಿಸುವ ಗುರಿ ಹೊಂದಬೇಕೆAದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಕರೆ ನೀಡಿದರು.
     ನವನಗರದ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪಕ್ಷದ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರನ್ನು ಈ ಬಾರಿ ೪೦೦ ಸ್ಥಾನಗಳೊಂದಿಗೆ ಗೆಲ್ಲಿಸಬೇಕು. ದೇಶದಲ್ಲಿ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಮಹತ್ತರ ಬದಲಾವಣೆಗಳು ದೇಶದಲ್ಲಿ ಆಗಿವೆ ಎಂದು ಹೇಳಿದರು. 
     ೨೦೪೭ಕ್ಕೆ ಭಾರತ ವಿಶ್ವಗುರುವಾಗುವ ನಿಟ್ಟಿನಲ್ಲಿ ಭಾರತೀಯ ಜನತಾ ಪಕ್ಷ ಹಾಗೂ ಪ್ರದಾಣಿ ನರೇಂದ್ರಮೋದಿಯವರು ದೇಶದ ಸಮಗ್ರ ಅಬಿವೃದ್ಧಿ ದೃಷ್ಟಿಯಿಂದ ಧಾರ್ಮಿಕ,ಸಾಮಾಜಿಕ,ಹಾಗೂ ಆರ್ಥಿಕವಾಗಿ ಪ್ರಗತಿಗೆ ಸಾಕಷ್ಟು ಯೋಜನೆಗಳನ್ನು ತರುವ ಮೂಲಕ ಹೊಸ ಭಾರತದ ದಿಕ್ಸೂಚಿಯನ್ನು ಬದಲಿಸಿದ್ದಾರೆ ಎಂದರು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಅವರು, ಎರಡನೇ ಬಾರಿಗೆ ಬಿಜೆಪಿ ಜಿಲ್ಲಾಧ್ಯಕ್ಷನಾಗಿ ಸೇವೆ ಸಲ್ಲಿಸುವ ಅವಕಾಶ ನೀಡಿದ ಜಿಲ್ಲೆಯ ನಾಯಕರು, ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು. ಮೊದಲ ಅವಧಿಯಂತೆ ಈ ಬಾರಿಯೂ ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಪಕ್ಷ ಮುನ್ನಡೆಸುವುದಾಗಿ ಹೇಳಿದರು. 
ವಿಧಾನ ಪರಿಷತ್ ಸದಸ್ಯರಾದ ಹಣಮಂತ ನಿರಾಣಿ, ಪಿ.ಎಚ್.ಪೂಜಾರ, ವಿಪ ಮಾಜಿ ಸದಸ್ಯ ನಾರಾಯಣಸಾ ಭಾಂಡಗೆ, ರಾಜಶೇಖರ ಶಿಲವಂತ, ಬೆಳಗಾವಿ ವಿಭಾಗದ ಪ್ರಧಾನ ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟ, ಸಹಪ್ರಭಾರಿ ಬಸವರಾಜ ಯಂಕAಚಿ, ಅಶೋಕ ಲಿಂಬಾವಳಿ, ರಾಜು ನಾಯ್ಕರ ಮತ್ತಿತರರು ಇದ್ದರು.
ಸಭೆಯಲ್ಲಿ ರಾಮಮಂದಿರ ನಿರ್ಮಾಣ ಹಾಗೂ ಲಾಲ್‌ಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ನೀಡಿರುವುದಕ್ಕೆ ಸಭೆಯಲ್ಲಿ ಅಭಿನಂದನಾ ನಿರ್ಣಯ ಕೈಗೊಳ್ಳಲಾಯಿತು. ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ಹಾಗೂ ದಲಿತ ವಿರೋಧಿ ನಡೆಸ ಅನುಸರಿಸುತ್ತಿದೆ ಎಂದು ಖಂಡನಾ ನಿರ್ಣಯ ಕೈಗೊಳ್ಳಲಾಯಿತು.