ತೋವಿವಿಯಲ್ಲಿ ನಾಳೆಯಿಂದ ವುಶು ಕ್ರೀಡಾಕೂಟ 

ತೋವಿವಿಯಲ್ಲಿ ನಾಳೆಯಿಂದ ವುಶು ಕ್ರೀಡಾಕೂಟ 
ಬಾಗಲಕೋಟೆ: 
ತೋಟಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯದ ಆವರಣದಲ್ಲಿ ಸೆ.೧ ರಿಂದ ಸೆ.೪ರವರೆಗೆ ೨೩ನೇ ರಾಜ್ಯ ಮಟ್ಟದ ವುಶು ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ವುಶು ಸಂಸ್ಥೆಯ ಅಧ್ಯಕ್ಷ ರಾಜು ನಾಯ್ಕರ್ ತಿಳಿಸಿದರು. 
 ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಸೆ.೧ರ ಬೆಳಿಗ್ಗೆ ೧೦ಕ್ಕೆ ಕ್ರೀಡಾಕೂಟವನ್ನು ರಾಜ್ಯ ವುಶು ಸಂಸ್ಥೆ ಅಧ್ಯಕ್ಷ ಹಾಗೂ ಮಾಜಿ ಶಾಸಕ ವೀರಣ್ಣ ಚರಂತಿಮಠ ಉದ್ಘಾಟಿಸಲಿದ್ದು, ತೋವಿವಿ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯ ವುಶು ಸಂಸ್ಥೆ ಉಪಾಧ್ಯಕ್ಷರಾದ ಅಶೋಕ ಸಜ್ಜನ(ಬೇವೂರ) ಹಾಗೂ ಕುಮಾರಸ್ವಾಮಿ ಹಿರೇಮಠ ಸೇರಿದಂತೆ ಅನೇಕರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು

.
ಸೆ.೪ ರಂದು ಸಂಜೆ ೪ಕ್ಕೆ ಹಮ್ಮಿಕೊಂಡಿರುವ ಸಮಾರೋಪ ಸಮಾರಂಭದಲ್ಲಿ ತೋವಿವಿ ಕುಲಪತಿ ಡಾ. ವಿಷ್ಣುವರ್ಧನ ಅಧ್ಯಕ್ಷತೆ ವಹಿಸಲಿದ್ದಾರೆ. ಬಾದಾಮಿ ಶಾಸಕ ಬಿ.ಬಿ.ಚಿಮ್ಮನಕಟ್ಟಿ, ಜಿಲ್ಲಾಧಿಕಾರಿ ಕೆ.ಎಂ.ಜಾನಕಿ, ಜಿಪಂ ಸಿಇಒ ಶಶಿಧರ ಕುರೇರ ಹಾಗೂ ಬೀಳಗಿಯ ಸ್ವಾಮಿ ವಿವೇಕಾನಂದ ಶಿಕ್ಷಣ ಸಮೂಹ ಸಂಸ್ಥೆಗಳ ಸಂಸ್ಥಾಪಕ ಎಂ.ಎನ್.ಪಾಟೀಲ ಸೇರಿದಂತೆ ಅನೇಕರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಸಬ್ ಜೂನಿಯರ್, ಜೂನಿಯರ್ ಹಾಗೂ ಸೀನಿಯರ್ ವಿಭಾಗದ ಈ ಕ್ರೀಡಾಕೂಟದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಅಂದಾಜು ೬೦೦ ಕ್ರೀಡಾಪಟುಗಳು, ತರಬೇತುದಾರರು ಹಾಗೂ ನಿರ್ಣಾಯಕರು ಪಾಲ್ಗೊಳ್ಳಲಿದ್ದಾರೆ. ಅವರಿಗೆ ಬೇಕಾದ ವಸತಿ ಹಾಗೂ ಊಟದ ವ್ಯವಸ್ಥೆ ಮಾಡಲಾಗುತ್ತಿದೆ. ಈ ಕ್ರೀಡಾಕೂಟದಲ್ಲಿ ವಿಜೇತರಾದವರು ರಾಷ್ಟç ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಲಿದ್ದಾರೆ ಎಂದು ತಿಳಿಸಿದರು.
ರಾಜ್ಯ ವುಶು ಸಂಸ್ಥೆ ಪ್ರಧಾನ ಕಾರ್ಯದರ್ಶಿ ಅಶೋಕ ಮೊಕಾಶಿ ಮಾತನಾಡಿ, ವುಶು ಕ್ರೀಡೆಯಲ್ಲಿ ಸಾಧನೆ ಮಾಡಿರುವ ಕ್ರೀಡಾಪಟುಗಳಿಗೆ ರಾಜ್ಯ ಸರಕಾರದಿಂದ ಬರುವ ಸ್ಕಾಲರಶಿಪ್ ನಿಲ್ಲಿಸಿದ್ದಾರೆ. ಇದರಿಂದ ಬಡ ಕ್ರೀಡಾಪಟುಗಳು ತುಂಬ ತೊಂದರೆ ಅನುಭವಿಸುತ್ತಿದ್ದಾರೆ. ಕಾರಣ ಸರಕಾರ ಸ್ಕಾಲರಶಿಪ್ ನೀಡುವುದು ಪುನಾರಂಭಿಸಬೇಕು ಎಂದು ಮನವಿ ಮಾಡಿದರು.
ರಾಜ್ಯ ವುಶು ಸಂಸ್ಥೆ ಕೋಶಾಧ್ಯಕ್ಷ ಸಂಗಮೇಶ ಲಾಯದಗುಂದಿ, ಕ್ರೀಡಾಕೂಟದ ಸಂಘಟನಾ ಕಾರ್ಯದರ್ಶಿ ಡಾ. ಆರ್.ಎಂ.ಹಿರೇಮಠ, ಉಪಾಧ್ಯಕ್ಷ ವಿವೇಕಾನಂದ ಗರಸಂಗಿ ಉಪಸ್ಥಿತರಿದ್ದರು.